ವಿಮೋಚನಕಾಂಡ 29:14

ಇದಲ್ಲದೆ ಹೋರಿಯ ಮಾಂಸ ವನ್ನೂ ಅದರ ಚರ್ಮವನ್ನೂ ಸಗಣಿಯನ್ನೂ ಪಾಳೆಯದ ಹೊರಗೆ ಬೆಂಕಿಯಿಂದ ಸುಡಬೇಕು. ಅದು ಪಾಪದ ಬಲಿಯಾಗಿದೆ.

ಸಂದರ್ಭದೊಂದಿಗೆ ಓದಿ · ವಿಮೋಚನಕಾಂಡ 29

12ನೀನು ಹೋರಿಯ ರಕ್ತವನ್ನು ತೆಗೆದುಕೊಂಡು ನಿನ್ನ ಬೆರಳಿನಿಂದ ಯಜ್ಞವೇದಿಯ ಕೊಂಬುಗಳಿಗೆ ಹಚ್ಚಿ ರಕ್ತವನ್ನೆಲ್ಲಾ ಯಜ್ಞವೇದಿಯ ಅಡಿಯಲ್ಲಿ ಸುರಿಯಬೇಕು.

13ನೀನು ಕರುಳುಗಳನ್ನೂ ಅವುಗಳ ಮೇಲೆ ಇರುವ ಎಲ್ಲಾ ಕೊಬ್ಬನ್ನೂ ಕಲಿಜದ ಮೇಲೆ ಬರುವ ಕೊಬ್ಬನ್ನೂ ಎರಡು ಮೂತ್ರಜನಕಾಂಗಗಳನ್ನೂ ಅವುಗಳ ಮೇಲೆ ಇರುವ ಕೊಬ್ಬನ್ನೂ ತೆಗೆದುಕೊಂಡು ಯಜ್ಞವೇದಿಯ ಮೇಲೆ ಸುಡಬೇಕು.

14ಇದಲ್ಲದೆ ಹೋರಿಯ ಮಾಂಸ ವನ್ನೂ ಅದರ ಚರ್ಮವನ್ನೂ ಸಗಣಿಯನ್ನೂ ಪಾಳೆಯದ ಹೊರಗೆ ಬೆಂಕಿಯಿಂದ ಸುಡಬೇಕು. ಅದು ಪಾಪದ ಬಲಿಯಾಗಿದೆ.

15ನೀನು ಒಂದು ಟಗರನ್ನು ಸಹ ತೆಗೆದುಕೊಳ್ಳ ಬೇಕು. ಆರೋನನೂ ಅವನ ಕುಮಾರರೂ ಆ ಟಗರಿನ ತಲೆಯ ಮೇಲೆ ತಮ್ಮ ಕೈಗಳನ್ನು ಇಡಬೇಕು.

16ತರು ವಾಯ ಆ ಟಗರನ್ನು ನೀನು ವಧಿಸಿ ಅದರ ರಕ್ತವನ್ನು ತೆಗೆದುಕೊಂಡು ಯಜ್ಞವೇದಿಯ ಮೇಲೆ ಸುತ್ತಲೂ ಚಿಮುಕಿಸಬೇಕು.

ವಿಮೋಚನಕಾಂಡ 29 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी