ಯೆಹೆಜ್ಕೇಲನು 22:9

ನಿನ್ನಲ್ಲಿ ರಕ್ತಚೆಲ್ಲುವ ಹಾಗೆ ಚಾಡಿ ಹೇಳುವ ಜನ ಇದ್ದಾರೆ; ಬೆಟ್ಟಗಳ ಮೇಲೆ ತಿನ್ನುವವರಿದ್ದಾರೆ; ದುರಾ ಚಾರಿಗಳು ನಿನ್ನ ಮಧ್ಯದಲ್ಲಿದ್ದಾರೆ.

ಸಂದರ್ಭದೊಂದಿಗೆ ಓದಿ · ಯೆಹೆಜ್ಕೇಲನು 22

7ನಿನ್ನಲ್ಲಿ ತಂದೆಯನ್ನೂ ತಾಯಿಯನ್ನೂ ಅಲಕ್ಷ್ಯ ಮಾಡಿದ್ದಾರೆ; ನಿನ್ನಲ್ಲಿ ಅಪರಿಚಿತರಿಗೆ ಬಲಾತ್ಕಾರ ಮಾಡಿದ್ದಾರೆ; ನಿನ್ನಲ್ಲಿ ದಿಕ್ಕಿಲ್ಲದವನನ್ನೂ ವಿಧವೆಯನ್ನೂ ಪೀಡಿಸಿದ್ದಾರೆ.

8ನೀನು ನನ್ನ ಪರಿಶುದ್ಧ ಸಂಗತಿಗಳನು ತಿರಸ್ಕರಿಸಿ ನನ್ನ ಸಬ್ಬತ್ತುಗಳನ್ನು ಅಪವಿತ್ರಪಡಿಸಿದ್ದೀ.

9ನಿನ್ನಲ್ಲಿ ರಕ್ತಚೆಲ್ಲುವ ಹಾಗೆ ಚಾಡಿ ಹೇಳುವ ಜನ ಇದ್ದಾರೆ; ಬೆಟ್ಟಗಳ ಮೇಲೆ ತಿನ್ನುವವರಿದ್ದಾರೆ; ದುರಾ ಚಾರಿಗಳು ನಿನ್ನ ಮಧ್ಯದಲ್ಲಿದ್ದಾರೆ.

10ನಿನ್ನಲ್ಲಿ ತಂದೆಯ ಬೆತ್ತಲೆತನವನ್ನು ಹೊರಗೆಡವಿದ್ದಾರೆ; ನಿನ್ನಲ್ಲಿ ಮುಟ್ಟಾಗಿ ಪ್ರತ್ಯೇಕವಾಗಿರುವವರನ್ನು ಕೂಡಿದ್ದಾರೆ;

11ಒಬ್ಬನು ತನ್ನ ನೆರೆಯವನ ಹೆಂಡತಿಯ ಸಂಗಡ ದುರಾಚಾರವನ್ನು ಮಾಡಿದ್ದಾನೆ; ಮತ್ತೊಬ್ಬನು ಅಕೃತ್ಯದಿಂದ ಸೊಸೆಯನ್ನು ಕೆಡಿಸಿದ್ದಾನೆ; ಇನ್ನೊಬ್ಬನು ತನ್ನ ತಂದೆಯ ಮಗಳಾದ ತನ್ನ ಸಹೋದರಿಯನ್ನೇ ಭಂಗಪಡಿಸಿದ್ದಾನೆ.

ಯೆಹೆಜ್ಕೇಲನು 22 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी