ಯೆಹೋಶುವ 21:1

ಲೇವಿಯರ ಪಿತೃಗಳ ಹಿರಿಯರು ಕಾನಾನ್‌ ದೇಶದ ಶೀಲೋವಿನಲ್ಲಿರುವ ಯಾಜಕ ನಾದ ಎಲಿಯಾಜರನ ಬಳಿಗೂ ನೂನನ ಮಗನಾದ ಯೆಹೋಶುವನ ಬಳಿಗೂ ಇಸ್ರಾಯೇಲ್‌ ಮಕ್ಕಳ ಗೋತ್ರಗಳ ಪಿತೃಗಳಲ್ಲಿರುವ ಹಿರಿಯರ ಬಳಿಗೂ ಬಂದು ಅವರ ಸಂಗಡ ಮಾತನಾಡಿ--

ಸಂದರ್ಭದೊಂದಿಗೆ ಓದಿ · ಯೆಹೋಶುವ 21

1ಲೇವಿಯರ ಪಿತೃಗಳ ಹಿರಿಯರು ಕಾನಾನ್‌ ದೇಶದ ಶೀಲೋವಿನಲ್ಲಿರುವ ಯಾಜಕ ನಾದ ಎಲಿಯಾಜರನ ಬಳಿಗೂ ನೂನನ ಮಗನಾದ ಯೆಹೋಶುವನ ಬಳಿಗೂ ಇಸ್ರಾಯೇಲ್‌ ಮಕ್ಕಳ ಗೋತ್ರಗಳ ಪಿತೃಗಳಲ್ಲಿರುವ ಹಿರಿಯರ ಬಳಿಗೂ ಬಂದು ಅವರ ಸಂಗಡ ಮಾತನಾಡಿ--

2ನಾವು ವಾಸವಾಗಿರುವ ಪಟ್ಟಣಗಳನ್ನು ನಮ್ಮ ಪಶುಗಳಿಗೋಸ್ಕರ ಅವುಗಳ ಉಪನಗರಗಳೊಂದಿಗೆ ನಮಗೆ ಕೊಡಬೇಕೆಂದು ಕರ್ತನು ಮೋಶೆಯ ಮುಖಾಂತರವಾಗಿ ಆಜ್ಞಾಪಿಸಿ ದ್ದಾನೆ ಅಂದರು.

3ಹಾಗೆಯೇ ಇಸ್ರಾಯೇಲ್‌ ಮಕ್ಕಳು ತಮ್ಮ ಬಾಧ್ಯತೆಯಲ್ಲಿ ಲೇವಿಯರಿಗೆ ಕರ್ತನ ಅಜ್ಞೆಯ ಪ್ರಕಾರ ಪಟ್ಟಣಗಳನ್ನೂ ಅವುಗಳ ಉಪನಗರಗಳನ್ನೂ ಕೊಟ್ಟರು. ಅವು ಯಾವವೆಂದರೆ--

ಯೆಹೋಶುವ 21 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी