ಯಾವನಾದರೂ ತನ್ನ ಹೆಂಡತಿಯನ್ನು ಬಿಟ್ಟುಬಿಡಬೇಕೆಂದಿದ್ದರೆ ಅವನು ಆಕೆಗೆ ತ್ಯಾಗಪತ್ರ ಕೊಡಲಿ ಎಂದು ಹೇಳಿಯದೆ;
29ಆದದರಿಂದ ನಿನ್ನ ಬಲಗಣ್ಣು ನಿನಗೆ ಅಭ್ಯಂತರವಾಗಿದ್ದರೆ ಅದನ್ನು ಕಿತ್ತು ನಿನ್ನಿಂದ ಬಿಸಾಡಿಬಿಡು; ಯಾಕಂದರೆ ನಿನ್ನ ಇಡೀ ಶರೀರವು ನರಕದಲ್ಲಿ ಹಾಕಲ್ಪಡುವದಕ್ಕಿಂತ ನಿನ್ನ ಅಂಗಗಳಲ್ಲಿ ಒಂದು ನಾಶವಾಗುವದು ನಿನಗೆ ಲಾಭಕರವಾಗಿದೆ.
30ನಿನ್ನ ಬಲಗೈ ನಿನಗೆ ಅಭ್ಯಂತರವಾಗಿದ್ದರೆ ಅದನ್ನು ಕಡಿದು ನಿನ್ನಿಂದ ಬಿಸಾಡಿಬಿಡು; ಯಾಕಂದರೆ ನಿನ್ನ ಇಡೀ ಶರೀರವು ನರಕದಲ್ಲಿ ಹಾಕಲ್ಪಡುವದಕ್ಕಿಂತ ನಿನ್ನ ಅಂಗಗಳಲ್ಲಿ ಒಂದು ನಾಶವಾಗುವದು ನಿನಗೆ ಲಾಭಕರವಾಗಿದೆ.
31ಯಾವನಾದರೂ ತನ್ನ ಹೆಂಡತಿಯನ್ನು ಬಿಟ್ಟುಬಿಡಬೇಕೆಂದಿದ್ದರೆ ಅವನು ಆಕೆಗೆ ತ್ಯಾಗಪತ್ರ ಕೊಡಲಿ ಎಂದು ಹೇಳಿಯದೆ;
32ಆದರೆ ನಾನು ನಿಮಗೆ ಹೇಳುವದೇನಂದರೆ--ಹಾದರದ ಕಾರಣ ದಿಂದಲ್ಲದೆ ತನ್ನ ಹೆಂಡತಿಯನ್ನು ಬಿಟ್ಟುಬಿಡುವವನು ಆಕೆಯು ವ್ಯಭಿಚಾರ ಮಾಡುವಂತೆ ಕಾರಣನಾಗುವನು; ಮತ್ತು ಬಿಡಲ್ಪಟ್ಟವಳನ್ನು ಯಾವನಾದರೂ ಮದುವೆ ಯಾದರೆ ಅವನು ವ್ಯಭಿಚಾರ ಮಾಡುವವನಾಗಿದ್ದಾನೆ.
33ನೀನು ಸುಳ್ಳಾಣೆ ಇಡಬೇಡ; ಆದರೆ ನಿನ್ನ ಪ್ರಮಾಣಗಳನ್ನು ಕರ್ತನಿಗೆ ಸಲ್ಲಿಸಬೇಕು ಎಂದು ಪೂರ್ವಿಕರು ಹೇಳಿರುವದನ್ನು ನೀವು ಕೇಳಿದ್ದೀರಿ.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ