ಯೆರೆಮಿಯ 12:4

ದೇಶವು ಅದರ ನಿವಾಸಿಗಳ ಕೆಟ್ಟತನ ಕ್ಕಾಗಿ ದುಃಖಿಸುವದೂ ಎಲ್ಲಾ ಹೊಲಗಳ ಹುಲ್ಲು ಒಣಗುವದೂ ಎಷ್ಟರ ಮಟ್ಟಿಗೆ? ಮೃಗಗಳೂ ಪಕ್ಷಿಗಳೂ ನಾಶವಾಗುತ್ತವೆ; ಅವರು--ಒಬ್ಬರೂ ನಮ್ಮ ಅಂತ್ಯವನ್ನು ನೋಡುವದಿಲ್ಲ ಎಂದು ಅಂದುಕೊಂಡಿದ್ದಾರೆ.

ಸಂದರ್ಭದೊಂದಿಗೆ ಓದಿ · ಯೆರೆಮಿಯ 12

2ನೀನು ಅವರನ್ನು ನೆಟ್ಟಿದ್ದೀ, ಹೌದು, ಅವರು ಬೇರೂರಿದ್ದಾರೆ; ಬೆಳೆಯುತ್ತಾರೆ, ಹೌದು, ಫಲಫಲಿಸುತ್ತಾರೆ; ನೀನು ಅವರ ಬಾಯಲ್ಲಿ ಸವಿಾಪವಾಗಿದ್ದೀ, ಅವರ ಅಂತ ರಿಂದ್ರಿಯಗಳಿಗೆ ದೂರವೇ.

3ಓ ಕರ್ತನೇ, ನೀನು ನನ್ನನ್ನು ತಿಳಿದಿದ್ದೀ; ನನ್ನನ್ನು ನೋಡಿ ನನ್ನ ಹೃದಯವು ನಿನ್ನ ಕಡೆಗೆ ಶೋಧಿಸಿದ್ದೀ; ಕೊಲೆಗೆ ಕುರಿಗಳಂತೆ ಅವ ರನ್ನು ಎಳೆದುಬಿಡು, ಸಂಹಾರದ ದಿನಕ್ಕೆ ಅವರನ್ನು ಸಿದ್ಧಮಾಡು.

4ದೇಶವು ಅದರ ನಿವಾಸಿಗಳ ಕೆಟ್ಟತನ ಕ್ಕಾಗಿ ದುಃಖಿಸುವದೂ ಎಲ್ಲಾ ಹೊಲಗಳ ಹುಲ್ಲು ಒಣಗುವದೂ ಎಷ್ಟರ ಮಟ್ಟಿಗೆ? ಮೃಗಗಳೂ ಪಕ್ಷಿಗಳೂ ನಾಶವಾಗುತ್ತವೆ; ಅವರು--ಒಬ್ಬರೂ ನಮ್ಮ ಅಂತ್ಯವನ್ನು ನೋಡುವದಿಲ್ಲ ಎಂದು ಅಂದುಕೊಂಡಿದ್ದಾರೆ.

5ಕಾಲಾ ಳುಗಳ ಸಂಗಡ ಓಡುವಾಗ ನಿನಗೆ ಆಯಾಸವಾದರೆ ಕುದುರೆಗಳ ಸಂಗಡ ಹೇಗೆ ಹೋರಾಡುವಿ? ನೀನು ಭರವಸವಿಟ್ಟಿರುವ ಸಮಾಧಾನದ ದೇಶದಲ್ಲಿ ಅವರು ನಿನ್ನನ್ನು ಆಯಾಸಪಡಿಸಿದರೆ ಯೊರ್ದನ್‌ ದಡವಿಾರು ವಾಗ ಏನು ಮಾಡುವಿ?

6ನಿನ್ನ ಸಹೋದರರೂ ನಿನ್ನ ತಂದೆಯ ಮನೆತನದವರೂ ಇವರೇ ನಿನಗೆ ವಂಚನೆ ಮಾಡಿದ್ದಾರೆ; ಹೌದು, ಇವರೇ ನಿನ್ನ ಹಿಂದೆ ಸಮೂಹವನ್ನು ಕರೆದಿದ್ದಾರೆ, ಅವರು ನಿನಗೆ ಒಳ್ಳೇ ಮಾತುಗಳನ್ನು ಹೇಳಿದರೂ ಅವರನ್ನು ನಂಬಬೇಡ.

ಯೆರೆಮಿಯ 12 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी