ಯೆಹೆಜ್ಕೇಲನು 8:4

ಇಗೋ, ಇಸ್ರಾ ಯೇಲಿನ ದೇವರ ಮಹಿಮೆಯು ನಾನು ಆ ಬಯಲು ಸೀಮೆಯಲ್ಲಿ ನೋಡಿದ ಆಕಾರದ ಪ್ರಕಾ ರವೇ ಅಲ್ಲಿ ಇತ್ತು.

ಸಂದರ್ಭದೊಂದಿಗೆ ಓದಿ · ಯೆಹೆಜ್ಕೇಲನು 8

2ಆಮೇಲೆ ನಾನು ನೋಡಲಾಗಿ ಇಗೋ, ಬೆಂಕಿಯಂತೆ ತೋರುವ ಒಬ್ಬನ ರೂಪವು ಕಾಣಿಸಿತು; ಅವನ ನಡುವಿನ ಮೇಲ್ಗಡೆಯೂ ಕೆಳಗಡೆಯೂ ಮೆರಗು ಮಾಡಿದ ಪೀತರತ್ನ ವರ್ಣದ ಹಾಗೆ ಹೊಳೆಯುತ್ತಿತ್ತು.

3ಕೈಯ ಹಾಗಿರುವ ಹಸ್ತವನ್ನು ಚಾಚಿ, ನನ್ನ ತಲೆಯ ಕೂದಲಿನಿಂದ ನನ್ನನ್ನು ಹಿಡಿ ದನು; ಆಗ ಆತ್ಮನು ನನ್ನನ್ನು ಭೂಮಿಗೂ ಆಕಾಶಕ್ಕೂ ಮಧ್ಯದಲ್ಲಿ ಎತ್ತಿ ನನ್ನನ್ನು ದೇವರದರ್ಶನಗಳಲ್ಲಿ ಯೆರೂ ಸಲೇಮಿಗೆ ಉತ್ತರದ ಕಡೆಗೆ ಎದುರಾಗಿರುವ ಒಳ ಬಾಗಲಿನ ಕಡೆಗೆ ಅಸೂಯೆ ಎಬ್ಬಿಸುವ ವಿಗ್ರಹವು ಇದ್ದಲ್ಲಿಗೆ ತೆಗೆದುಕೊಂಡು ಹೋದನು.

4ಇಗೋ, ಇಸ್ರಾ ಯೇಲಿನ ದೇವರ ಮಹಿಮೆಯು ನಾನು ಆ ಬಯಲು ಸೀಮೆಯಲ್ಲಿ ನೋಡಿದ ಆಕಾರದ ಪ್ರಕಾ ರವೇ ಅಲ್ಲಿ ಇತ್ತು.

5ಆಮೇಲೆ ಆತನು ನನಗೆ --ಮನುಷ್ಯಪುತ್ರನೇ, ಈಗ ಉತ್ತರದ ಕಡೆಗೆ ನಿನ್ನ ಕಣ್ಣುಗಳನ್ನು ಎತ್ತು ಅಂದಾಗ ನಾನು ಉತ್ತರದ ಕಡೆಗೆ ಕಣ್ಣುಗಳನ್ನೆತ್ತಿದೆನು; ಇಗೋ, ಉತ್ತರದಲ್ಲಿ ಯಜ್ಞ ವೇದಿಯ ಬಾಗಿಲಲ್ಲಿ ಅಸೂಯೆ ವಿಗ್ರಹವು ಪ್ರವೇಶ ದಲ್ಲಿತ್ತು.

6ಇದಲ್ಲದೆ ಆತನು ನನಗೆ ಹೇಳಿದ್ದೇನಂದರೆ --ಮನುಷ್ಯಪುತ್ರನೇ, ಅವರು ಮಾಡುತ್ತಿರುವದನ್ನು ನೋಡುತ್ತಿರುವಿಯಾ? ನಾನು ನನ್ನ ಪರಿಶುದ್ಧ ಸ್ಥಳವನ್ನು ಬಿಟ್ಟು ದೂರ ಹೋಗುವ ಹಾಗೆ ಇಸ್ರಾಯೇಲಿನ ಮನೆತನದವರು ಇಲ್ಲಿ ನಡೆಸುತ್ತಿರುವ ದೊಡ್ಡ ಅಸಹ್ಯ ಗಳನ್ನು ನೋಡುತ್ತಿರುವಿಯಾ? ಆದರೆ ಮತ್ತೆ ತಿರು ಗಿಕೋ, ನೀನು ಇನ್ನೂ ದೊಡ್ಡ ಅಸಹ್ಯಗಳನ್ನು ನೋಡುವಿ ಅಂದನು.

ಯೆಹೆಜ್ಕೇಲನು 8 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी