ವಿಮೋಚನಕಾಂಡ 38:16

ಅಂಗಳದ ಸುತ್ತಲಿದ್ದ ಎಲ್ಲ ತೆರೆಗಳು ನಯವಾಗಿ ಹೊಸೆದ ನೂಲಿನ ಬಟ್ಟೆಯಿಂದ ಮಾಡಲ್ಪಟ್ಟಿದ್ದವು.

ಸಂದರ್ಭದೊಂದಿಗೆ ಓದಿ · ವಿಮೋಚನಕಾಂಡ 38

14ದ್ವಾರದ ಒಂದು ಬದಿಯ ತೆರೆಗಳು ಹದಿನೈದು ಮೊಳ ಉದ್ದ ವಾಗಿದ್ದವು; ಅವುಗಳಿಗೆ ಮೂರು ಸ್ತಂಭಗಳೂ ಆ ಸ್ತಂಭಗಳಿಗೆ ಮೂರು ಕಾಲುಕುಣಿಕೆಗಳೂ ಇದ್ದವು.

15ಅಂಗಳದ ಇನ್ನೊಂದು ಬದಿಯ ದ್ವಾರದ ಎರಡು ಕಡೆಗಳಲ್ಲಿ ಹದಿನೈದು ಮೊಳ ಉದ್ದವಾದ ತೆರೆಗಳಿದ್ದವು; ಅವುಗಳಿಗೆ ಮೂರು ಸ್ತಂಭಗಳೂ ಆ ಸ್ತಂಭಗಳಿಗೆ ಮೂರು ಕಾಲುಕುಣಿಕೆಗಳೂ ಇದ್ದವು.

16ಅಂಗಳದ ಸುತ್ತಲಿದ್ದ ಎಲ್ಲ ತೆರೆಗಳು ನಯವಾಗಿ ಹೊಸೆದ ನೂಲಿನ ಬಟ್ಟೆಯಿಂದ ಮಾಡಲ್ಪಟ್ಟಿದ್ದವು.

17ಸ್ತಂಭಗಳ ಕಾಲು ಕುಣಿಕೆಗಳು ಹಿತ್ತಾಳೆಯವುಗಳು; ಆ ಸ್ತಂಭಗಳ ಕೊಂಡಿಯೂ ಅಲಂಕಾರದ ಪಟ್ಟಿಗಳೂ ಬೆಳ್ಳಿಯದಾ ಗಿದ್ದವು; ಕಂಬದ ಬೋದಿಗಳು ಬೆಳ್ಳಿಯಿಂದ ಹೊದಿಸ ಲ್ಪಟ್ಟಿದ್ದವು; ಅಂಗಳದ ಎಲ್ಲಾ ಸ್ತಂಭಗಳು ಬೆಳ್ಳಿಯ ಅಲಂಕಾರದ ಪಟ್ಟಿಗಳಿಂದ ಸುತ್ತುವರಿಯಲ್ಪಟ್ಟಿದ್ದವು.

18ಅಂಗಳ ದ್ವಾರದ ತೆರೆಯು ನಯವಾಗಿ ಹೊಸೆದ ನೂಲಿನ ಬಟ್ಟೆಯಾಗಿತ್ತು; ಅದರ ಮೇಲೆ ನೀಲಿ ಧೂಮ್ರ ರಕ್ತವರ್ಣ ದಾರಗಳಿಂದ ಕಸೂತಿ ಕೆಲಸ ಮಾಡಲಾಗಿತ್ತು; ಅವು ಇಪ್ಪತ್ತು ಮೊಳ ಉದ್ದವಾಗಿದ್ದು ಅಗಲ ಎತ್ತರಗಳಲ್ಲಿ ಅಂಗಳದ ಉಳಿದ ತೆರೆಗಳಿಗೆ ಸರಿಯಾಗುವಂತೆ ಐದು ಮೊಳ ಇತ್ತು.

ವಿಮೋಚನಕಾಂಡ 38 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी