ಜೆಕರ್ಯ 14:18

ಮಳೆ ಇಲ್ಲದ ಐಗುಪ್ತದ ಗೋತ್ರದವರು ಹೋಗದಿದ್ದರೆ ಗುಡಾರಗಳ ಹಬ್ಬವನ್ನು ಆಚರಿಸುವದಕ್ಕೆ ಬಾರದ ಅನ್ಯಜನಾಂಗಗಳನ್ನು ಕರ್ತನು ಹೊಡೆಯುವ ವ್ಯಾಧಿಯು ಅವರ ಮೇಲೆ ಇರುವದು.

ಸಂದರ್ಭದೊಂದಿಗೆ ಓದಿ · ಜೆಕರ್ಯ 14

16ಆಗುವದೇನಂದರೆ--ಯೆರೂಸಲೇಮಿಗೆ ವಿರೋಧವಾಗಿ ಬಂದ ಎಲ್ಲಾ ಜನಾಂಗ ಗಳಲ್ಲಿ ಉಳಿದವರೆಲ್ಲಾ ವರುಷ ವರುಷಕ್ಕೆ ಸೈನ್ಯಗಳ ಕರ್ತನಾದ ಅರಸನನ್ನು ಆರಾಧಿಸುವದಕ್ಕೂ ಗುಡಾ ರಗಳ ಹಬ್ಬವನ್ನು ಆಚರಿಸುವದಕ್ಕೂ ಹೋಗುವರು.

17ಆಗುವದೇನಂದರೆ, ಭೂಮಿಯ ಗೋತ್ರಗಳಲ್ಲಿ ಸೈನ್ಯಗಳ ಕರ್ತನಾದ ಅರಸನನ್ನು ಆರಾಧಿಸುವದಕ್ಕೆ ಯೆರೂಸಲೇಮಿಗೆ ಹೋಗದೆ ಇರುವವರ್ಯಾರೋ ಅವರ ಮೇಲೆ ಮಳೆ ಇಲ್ಲದೆ ಇರುವದು.

18ಮಳೆ ಇಲ್ಲದ ಐಗುಪ್ತದ ಗೋತ್ರದವರು ಹೋಗದಿದ್ದರೆ ಗುಡಾರಗಳ ಹಬ್ಬವನ್ನು ಆಚರಿಸುವದಕ್ಕೆ ಬಾರದ ಅನ್ಯಜನಾಂಗಗಳನ್ನು ಕರ್ತನು ಹೊಡೆಯುವ ವ್ಯಾಧಿಯು ಅವರ ಮೇಲೆ ಇರುವದು.

19ಇದೇ ಐಗುಪ್ತದ ದಂಡನೆಯೂ ಗುಡಾರಗಳ ಹಬ್ಬ ವನ್ನು ಆಚರಿಸುವದಕ್ಕೆ ಬಾರದ ಎಲ್ಲಾ ಜನಾಂಗಗಳ ದಂಡನೆಯೂ ಆಗಿರುವದು.

20ಆ ದಿನದಲ್ಲಿ ಕುದುರೆಗಳ ಗೆಜ್ಜೆಗಳ ಮೇಲೆ ಕರ್ತನಿಗೆ ಪರಿಶುದ್ಧವು ಎಂದಿರುವದು; ಕರ್ತನ ಆಲಯದ ಪಾತ್ರೆಗಳು ಬಲಿಪೀಠದ ಮುಂದಿನ ಪಾತ್ರೆಗಳ ಹಾಗಿರುವವು.

ಜೆಕರ್ಯ 14 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी