ಇದಾದ ಮೇಲೆ ಯೇಸು ಕಪೆರ್ನೌಮಿನಲ್ಲಿ ಪ್ರವೇಶಿಸಿದಾಗ ಒಬ್ಬ ಶತಾಧಿಪತಿಯು ಆತನ ಬಳಿಗೆ ಬಂದು--
3ಆಗ ಯೇಸು ತನ್ನ ಕೈಯನ್ನು ಚಾಚಿ ಅವನನ್ನು ಮುಟ್ಟಿ--ನನಗೆ ಮನಸ್ಸುಂಟು; ನೀನು ಶುದ್ಧನಾಗು ಅಂದನು. ತಕ್ಷಣವೇ ಅವನ ಕುಷ್ಠವು ಹೋಗಿ ಅವನು ಶುದ್ಧನಾದನು.
4ಯೇಸು ಅವನಿಗೆ--ನೀನು ಯಾರಿಗೂ ಹೇಳಬೇಡ ನೋಡು; ಹೊರಟುಹೋಗಿ ಯಾಜಕನಿಗೆ ನಿನ್ನನ್ನು ತೋರಿಸಿಕೊಂಡು ಅವರಿಗೆ ಸಾಕ್ಷಿಯಾಗಿರುವಂತೆ ಮೋಶೆಯು ಆಜ್ಞಾಪಿಸಿದ ಕಾಣಿಕೆಯನ್ನು ಅರ್ಪಿಸು ಎಂದು ಹೇಳಿದನು.
5ಇದಾದ ಮೇಲೆ ಯೇಸು ಕಪೆರ್ನೌಮಿನಲ್ಲಿ ಪ್ರವೇಶಿಸಿದಾಗ ಒಬ್ಬ ಶತಾಧಿಪತಿಯು ಆತನ ಬಳಿಗೆ ಬಂದು--
6ಕರ್ತನೇ, ನನ್ನ ಸೇವಕನು ಪಾರ್ಶ್ವವಾಯು ರೋಗದಿಂದ ಬಹಳವಾಗಿ ಸಂಕಟಪಡುತ್ತಾ ಮನೆ ಯಲ್ಲಿ ಮಲಗಿದ್ದಾನೆ ಎಂದು ಹೇಳಿ ಬೇಡಿಕೊಂಡನು.
7ಯೇಸು ಅವನಿಗೆ--ನಾನು ಬಂದು ಅವನನ್ನು ಸ್ವಸ್ಥಮಾಡುತ್ತೇನೆ ಅಂದನು.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ