ಧರ್ಮೋಪದೇಶಕಾಂಡ 9:3

ಹೀಗಿರುವದರಿಂದ ನೀನು ಈಹೊತ್ತು ತಿಳಿದುಕೊಳ್ಳತಕ್ಕದ್ದೇನಂದರೆ--ನಿನ್ನ ದೇವ ರಾದ ಕರ್ತನೇ ನಿನ್ನ ಮುಂದೆ ದಾಟಿಹೋಗುತ್ತಾನೆ; ಆತನು ದಹಿಸುವ ಅಗ್ನಿಯಾಗಿ ಅವರನ್ನು ನಾಶಮಾಡು ವನು; ಆತನು ಅವರನ್ನು ನಿನ್ನ ಮುಂದೆ ತಗ್ಗಿಸುವನು; ಈ ಪ್ರಕಾರ ಅವರನ್ನು ಸ್ವಾಧೀನಪಡಿಸಿಕೊಂಡು ಕರ್ತನು ನಿನಗೆ ಹೇಳಿದ ಹಾಗೆ ಅವರನ್ನು ಬೇಗ ನಾಶಮಾಡುವಿ.

ಸಂದರ್ಭದೊಂದಿಗೆ ಓದಿ · ಧರ್ಮೋಪದೇಶಕಾಂಡ 9

1ಓ ಇಸ್ರಾಯೇಲೇ, ಕೇಳು; ನೀನು ಹೋಗಿ ನಿನಗಿಂತ ದೊಡ್ಡದಾದ ಬಲಿಷ್ಠ ಜನಾಂಗ ಗಳನ್ನೂ ಆಕಾಶದ ವರೆಗೆ ಭದ್ರಮಾಡಿದ ದೊಡ್ಡ ಪಟ್ಟಣಗಳನ್ನೂ

2ಅನಾಕ್ಯರ ಮಕ್ಕಳ ಮುಂದೆ ಯಾರು ನಿಲ್ಲುವರು ಎಂದು ನೀನು ಕೇಳಿ ತಿಳುಕೊಂಡಂಥ ಆ ಮಹಾ ಎತ್ತರವಾದ ಜನವಾಗಿರುವ ಅನಾಕ್ಯರ ಮಕ್ಕಳನ್ನೂ ಸ್ವತಂತ್ರಿಸಿಕೊಳ್ಳುವದಕ್ಕೆ ಈಹೊತ್ತು ಯೊರ್ದನನ್ನು ದಾಟುತ್ತೀ.

3ಹೀಗಿರುವದರಿಂದ ನೀನು ಈಹೊತ್ತು ತಿಳಿದುಕೊಳ್ಳತಕ್ಕದ್ದೇನಂದರೆ--ನಿನ್ನ ದೇವ ರಾದ ಕರ್ತನೇ ನಿನ್ನ ಮುಂದೆ ದಾಟಿಹೋಗುತ್ತಾನೆ; ಆತನು ದಹಿಸುವ ಅಗ್ನಿಯಾಗಿ ಅವರನ್ನು ನಾಶಮಾಡು ವನು; ಆತನು ಅವರನ್ನು ನಿನ್ನ ಮುಂದೆ ತಗ್ಗಿಸುವನು; ಈ ಪ್ರಕಾರ ಅವರನ್ನು ಸ್ವಾಧೀನಪಡಿಸಿಕೊಂಡು ಕರ್ತನು ನಿನಗೆ ಹೇಳಿದ ಹಾಗೆ ಅವರನ್ನು ಬೇಗ ನಾಶಮಾಡುವಿ.

4ನಿನ್ನ ದೇವರಾದ ಕರ್ತನು ಅವರನ್ನು ನಿನ್ನ ಮುಂದೆ ತಳ್ಳಿಹಾಕಿದಾಗ--ನನ್ನ ನೀತಿಯ ನಿಮಿತ್ತ ಈ ದೇಶವನ್ನು ಸ್ವತಂತ್ರಿಸಿಕೊಳ್ಳುವ ಹಾಗೆ ಕರ್ತನು ನನ್ನನ್ನು ಕರಕೊಂಡು ಬಂದಿದ್ದಾನೆಂದು ನಿನ್ನ ಹೃದಯದಲ್ಲಿ ಹೇಳಿಕೊಳ್ಳ ಬಾರದು; ಆ ಜನಾಂಗಗಳ ಕೆಟ್ಟತನದ ನಿಮಿತ್ತ ಕರ್ತನು ಅವರನ್ನು ನಿನ್ನ ಮುಂದೆ ಹೊರಡಿಸುತ್ತಾನೆ.

5ನಿನ್ನ ನೀತಿಗೋಸ್ಕರವೂ ನಿನ್ನ ಹೃದಯದ ಯಥಾರ್ಥತೆ ಗೋಸ್ಕರವೂ ನೀನು ಅವರ ದೇಶವನ್ನು ಸ್ವತಂತ್ರಿಸಿ ಕೊಳ್ಳುವದಕ್ಕೆ ಬರುವದಿಲ್ಲ; ಆ ಜನಾಂಗಗಳ ಕೆಟ್ಟತನ ಕ್ಕೋಸ್ಕರವೂ ಕರ್ತನು ನಿನ್ನ ಪಿತೃಗಳಾದ ಅಬ್ರಹಾಮ್‌ ಇಸಾಕ್‌ ಯಾಕೋಬರಿಗೆ ಕೊಟ್ಟ ಮಾತನ್ನು ಪೂರೈಸುವ ಹಾಗೆಯೂ ನಿನ್ನ ದೇವರಾದ ಕರ್ತನು ಅವರನ್ನು ನಿನ್ನ ಮುಂದೆ ಹೊರಡಿಸುತ್ತಾನೆ.

ಧರ್ಮೋಪದೇಶಕಾಂಡ 9 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी