ಯೆಹೆಜ್ಕೇಲನು 26:9

ತನ್ನ ಯುದ್ಧಯಂತ್ರಗಳನ್ನು ನಿನ್ನ ಗೋಡೆಗಳಿಗೆ ವಿರೋಧ ವಾಗಿ ತಾಕಿಸುವೆನು ನಿನ್ನ ಗೋಪುರಗಳನ್ನು ತನ್ನ ಕೊಡಲಿಗಳಿಂದ ಒಡೆದು ಬಿಡುವನು.

ಸಂದರ್ಭದೊಂದಿಗೆ ಓದಿ · ಯೆಹೆಜ್ಕೇಲನು 26

7ದೇವರಾದ ಕರ್ತನು ಹೀಗೆ ಹೇಳು ತ್ತಾನೆ--ಇಗೋ, ಉತ್ತರದ ರಾಜಾಧಿರಾಜನೂ ಬಾಬೆಲಿನ ಅರಸನೂ ಆದ ನೆಬೂಕದ್ನೆಚ್ಚರನನ್ನು ಕುದುರೆಗಳ ಸಂಗಡಲೂ ಸವಾರರ ಸಂಗಡಲೂ ರಥಗಳ ಸಂಗಡಲೂ ಬಹು ಜನರ ಸಂಗಡಲೂ ತೂರಿನ ಮೇಲೆ ತರುತ್ತೇನೆ.

8ಅವನು ಬಯಲು ಭೂಮಿಯಲ್ಲಿನ ನಿನ್ನ ಕುಮಾರ್ತೆಯರನ್ನು ಖಡ್ಗದಿಂದ ಕೊಂದು ನಿನಗೆ ವಿರೋಧವಾಗಿ ಕೋಟೆಯನ್ನು ಕಟ್ಟಿ ದಿಬ್ಬ ಹಾಕಿ ನಿನಗೆ ವಿರೋಧವಾಗಿ ಖೇಡ್ಯವನ್ನು ಎತ್ತುವನು;

9ತನ್ನ ಯುದ್ಧಯಂತ್ರಗಳನ್ನು ನಿನ್ನ ಗೋಡೆಗಳಿಗೆ ವಿರೋಧ ವಾಗಿ ತಾಕಿಸುವೆನು ನಿನ್ನ ಗೋಪುರಗಳನ್ನು ತನ್ನ ಕೊಡಲಿಗಳಿಂದ ಒಡೆದು ಬಿಡುವನು.

10ಅವನ ಲೆಕ್ಕವಿಲ್ಲದ ಕುದುರೆಗಳಿಂದ ಎದ್ದ ಧೂಳು ನಿನ್ನನ್ನು ಮುಚ್ಚುವದು; ಗೋಡೆಯಿಲ್ಲದ ಕೋಟೆಯೊಳಗೆ ಶತ್ರು ಗಳು ಪ್ರವೇಶಿಸುವ ಪ್ರಕಾರ ಅವರು ನಿನ್ನ ಬಾಗಿಲು ಗಳಲ್ಲಿ ಪ್ರವೇಶಿಸುವಾಗ ಸವಾರರ, ರಥಗಳ, ಚಕ್ರಗಳ ಶಬ್ದದಿಂದ ನಿನ್ನ ಗೋಡೆಗಳು ಕದಲುವವು.

11ಅವನು ತನ್ನ ಕುದುರೆಗಳ ಗೊರಸುಗಳಿಂದ ನಿನ್ನ ಬೀದಿಗಳನ್ನೆಲ್ಲಾ ತುಳಿಸುವನು; ಜನರನ್ನು ಕತ್ತಿಯಿಂದ ಕೊಲ್ಲುವನು; ಬಲವಾದ ಕೋಟೆಗಳು ನೆಲಕ್ಕೆ ಬೀಳುವವು.

ಯೆಹೆಜ್ಕೇಲನು 26 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी