ಯೆಶಾಯ 10:26

ಸೈನ್ಯಗಳ ಕರ್ತನು ಓರೇಬನ ಬಂಡೆಯ ಬಳಿಯಲ್ಲಿ ಮಿದ್ಯಾನ್ಯರನ್ನು ಹತಮಾಡಿದಂತೆ ಆತನು ಕೋಲನ್ನು ಸಮುದ್ರದ ಮೇಲೆ ಚಾಚಿ, ಐಗುಪ್ತ್ಯರ ಮೇಲೆ ಎತ್ತಿದಂತೆ ಎತ್ತುವನು.

ಸಂದರ್ಭದೊಂದಿಗೆ ಓದಿ · ಯೆಶಾಯ 10

24ಆದದರಿಂದ ಸೈನ್ಯಗಳ ದೇವರಾದ ಕರ್ತನು ಇಂತೆ ನ್ನುತ್ತಾನೆ--ಚೀಯೋನಿನಲ್ಲಿ ವಾಸಿಸುವ ಓ ನನ್ನ ಜನರೇ, ಐಗುಪ್ತ್ಯರಂತೆ ನಿಮ್ಮನ್ನು ಕೋಲಿನಿಂದ ಹೊಡೆದು ನಿಮಗೆ ವಿರುದ್ಧವಾಗಿ ದೊಣ್ಣೆಯನ್ನು ಎತ್ತುವ ಅಶ್ಶೂರರಿಗೆ ಭಯಪಡಬೇಡಿರಿ.

25ಇನ್ನು ಸ್ವಲ್ಪ ಕಾಲದಲ್ಲಿ, (ನಿಮ್ಮ ಮೇಲಿನ) ಉಗ್ರವು ತೀರಿ ನನ್ನ ಕೋಪವು ಅವರ ನಾಶನಕ್ಕಾ ಗುವದು.

26ಸೈನ್ಯಗಳ ಕರ್ತನು ಓರೇಬನ ಬಂಡೆಯ ಬಳಿಯಲ್ಲಿ ಮಿದ್ಯಾನ್ಯರನ್ನು ಹತಮಾಡಿದಂತೆ ಆತನು ಕೋಲನ್ನು ಸಮುದ್ರದ ಮೇಲೆ ಚಾಚಿ, ಐಗುಪ್ತ್ಯರ ಮೇಲೆ ಎತ್ತಿದಂತೆ ಎತ್ತುವನು.

27ಆ ದಿನದಲ್ಲಿ ಅವರು ಹೊರಿಸಿದ ಹೊರೆಯು ನಿಮ್ಮ ಬೆನ್ನಿನಿಂದಲೂ ಹೂಡಿದ ನೊಗವು ನಿಮ್ಮ ಕುತ್ತಿಗೆಯಿಂದಲೂ ತೊಲಗುವದು; ನೀವು ಅಭಿಷಿಕ್ತರಾದ ಕಾರಣ ನೊಗವು ನಾಶವಾಗಿ ಹೋಗುವದು.

28ಅವನು ಅಯ್ಯಾಥಿಗೆ ಬಂದನು, ಮಿಗ್ರೋನನ್ನು ಹಾದುಹೋಗಿ ಮಿಕ್ಮಾಷಿನಲ್ಲಿ ತನ್ನ ಸಾಮಗ್ರಿಯನ್ನು ಇಟ್ಟಿದ್ದಾನೆ.

ಯೆಶಾಯ 10 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी