ವಿಮೋಚನಕಾಂಡ 11:4

ಆಗ ಮೋಶೆಯು ಫರೋಹನಿಗೆ--ಕರ್ತನು ಹೀಗೆ ಹೇಳುತ್ತಾನೆ--ಸುಮಾರು ಮಧ್ಯರಾತ್ರಿಯಲ್ಲಿ ನಾನು ಐಗುಪ್ತದ ಮಧ್ಯದಲ್ಲಿ ಹಾದು ಹೋಗುವೆನು.

ಸಂದರ್ಭದೊಂದಿಗೆ ಓದಿ · ವಿಮೋಚನಕಾಂಡ 11

2ಪ್ರತಿಯೊಬ್ಬನು ತನ್ನ ನೆರೆಯವ ನಿಂದಲೂ ಪ್ರತಿ ಸ್ತ್ರೀಯು ತನ್ನ ನೆರೆಯವಳಿಂದಲೂ ಬೆಳ್ಳಿ ಬಂಗಾರದ ಒಡವೆಗಳನ್ನು ಕೊಡುವ ಹಾಗೆ ಕೇಳಿಕೊಳ್ಳಬೇಕು.

3ಇದಲ್ಲದೆ ಕರ್ತನು ಐಗುಪ್ತ್ಯರ ದೃಷ್ಟಿಯಲ್ಲಿ ಜನರಿಗೆ ದಯೆದೊರಕುವಂತೆ ಮಾಡಿದನು. ಆ ಮನುಷ್ಯನಾದ ಮೋಶೆಯು ಐಗುಪ್ತದೇಶದಲ್ಲಿಯೂ ಫರೋಹನ ಸೇವಕರ ದೃಷ್ಟಿಯಲ್ಲಿಯೂ ಜನರ ದೃಷ್ಟಿಯಲ್ಲಿಯೂ ಬಹು ದೊಡ್ಡವನಾಗಿದ್ದನು.

4ಆಗ ಮೋಶೆಯು ಫರೋಹನಿಗೆ--ಕರ್ತನು ಹೀಗೆ ಹೇಳುತ್ತಾನೆ--ಸುಮಾರು ಮಧ್ಯರಾತ್ರಿಯಲ್ಲಿ ನಾನು ಐಗುಪ್ತದ ಮಧ್ಯದಲ್ಲಿ ಹಾದು ಹೋಗುವೆನು.

5ಆಗ ಐಗುಪ್ತದೇಶದ ಚೊಚ್ಚಲ ಮಕ್ಕಳು ಅಂದರೆ ಸಿಂಹಾ ಸನದ ಮೇಲೆ ಕೂತಿರುವ ಫರೋಹನ ಚೊಚ್ಚಲ ಮಗನು ಮೊದಲುಗೊಂಡು ಬೀಸುವ ಕಲ್ಲಿನ ಹಿಂದೆ ಇರುವ ದಾಸಿಯ ಚೊಚ್ಚಲ ಮಗನ ವರೆಗೆ ಮತ್ತು ಪಶುಗಳಲ್ಲಿ ಚೊಚ್ಚಲಾದವುಗಳೆಲ್ಲವು ಸಾಯುವವು.

6ಐಗುಪ್ತದೇಶದಲ್ಲೆಲ್ಲಾ ದೊಡ್ಡ ಗೋಳಾಟವಿರುವದು. ಇಂಥದ್ದು ಹಿಂದೆಯೂ ಇರಲಿಲ್ಲ, ಇನ್ನು ಮುಂದೆಯೂ ಇರುವದಿಲ್ಲ.

ವಿಮೋಚನಕಾಂಡ 11 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी