೨ ಅರಸುಗಳು 24:4

ಇದಲ್ಲದೆ ಅವನು ಚೆಲ್ಲಿದ ನಿರಪರಾಧದ ರಕ್ತದ ನಿಮಿತ್ತ ಇದು ಉಂಟಾಯಿತು. ಅವನು ನಿರಪರಾಧದ ರಕ್ತದಿಂದ ಯೆರೂಸಲೇಮನ್ನು ತುಂಬಿಸಿದ್ದನು. ಕರ್ತನು ಅದನ್ನು ಮನ್ನಿಸಲೊಲ್ಲದೆ ಇದ್ದನು.

ಸಂದರ್ಭದೊಂದಿಗೆ ಓದಿ · ೨ ಅರಸುಗಳು 24

2ಆದರೆ ಕರ್ತನು ಕಸ್ದೀಯರ, ಅರಾಮ್ಯರ, ಮೋವಾಬ್ಯರ, ಅಮ್ಮೋನ್ಯರ ಗುಂಪುಗಳನ್ನೂ ಅವನ ಮೇಲೆ ಕಳುಹಿಸಿದನು. ಕರ್ತನು ಪ್ರವಾದಿಗಳಾದ ತನ್ನ ಸೇವಕರ ಮುಖಾಂತರ ಹೇಳಿದ ಮಾತಿನ ಪ್ರಕಾರ ಯೆಹೂದವನ್ನು ನಾಶ ಮಾಡುವಂತೆ ಅದರ ಮೇಲೆ ಅವರನ್ನು ಬರಮಾಡಿದನು.

3ನಿಶ್ಚಯವಾಗಿ ಕರ್ತನ ಅಪ್ಪಣೆಯಿಂದ ಇದು ಯೆಹೂದದ ಮೇಲೆ ಆಯಿತು. ಅದೇನಂದರೆ, ಮನಸ್ಸೆಯು ತನ್ನ ಎಲ್ಲಾ ಕೃತ್ಯಗಳಿಂದ ಮಾಡಿದ ಪಾಪಗಳ ನಿಮಿತ್ತ ಅವರನ್ನು ಆತನು ತನ್ನ ಸಮ್ಮುಖದಿಂದ ತೆಗೆದು ಹಾಕುವದಕ್ಕೋಸ್ಕರವೇ.

4ಇದಲ್ಲದೆ ಅವನು ಚೆಲ್ಲಿದ ನಿರಪರಾಧದ ರಕ್ತದ ನಿಮಿತ್ತ ಇದು ಉಂಟಾಯಿತು. ಅವನು ನಿರಪರಾಧದ ರಕ್ತದಿಂದ ಯೆರೂಸಲೇಮನ್ನು ತುಂಬಿಸಿದ್ದನು. ಕರ್ತನು ಅದನ್ನು ಮನ್ನಿಸಲೊಲ್ಲದೆ ಇದ್ದನು.

5ಯೆಹೋಯಾ ಕೀಮನ ಇತರ ಕ್ರಿಯೆಗಳೂ ಅವನು ಮಾಡಿದ ಎಲ್ಲವೂ ಯೆಹೂದದ ಅರಸುಗಳ ವೃತ್ತಾಂತಗಳ ಪುಸ್ತಕದಲ್ಲಿ ಬರೆಯಲ್ಪಡಲಿಲ್ಲವೋ?

6ಯೆಹೋಯಾಕೀಮನು ತನ್ನ ಪಿತೃಗಳ ಸಂಗಡ ನಿದ್ರಿಸಿದನು; ಅವನ ಮಗನಾದ ಯೆಹೋಯಾಖೀನನು ಅವನಿಗೆ ಬದಲಾಗಿ ಅರಸ ನಾದನು.

೨ ಅರಸುಗಳು 24 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी