ದಾನಿಯೇಲನು 11:43

ಬಂಗಾರ ಬೆಳ್ಳಿ ಬೊಕ್ಕಸಗಳ ಮೇಲೆಯೂ ಐಗುಪ್ತದ ಎಲ್ಲಾ ಅಮೂಲ್ಯವಸ್ತುಗಳ ಮೇಲೆಯೂ ಅವನಿಗೆ ಅಧಿಕಾರವಿರುವದು. ಲೂಬ್ಯರೂ ಐಥೋ ಪ್ಯರೂ ಅವನನ್ನು ಹಿಂಬಾಲಿಸುವರು.

ಸಂದರ್ಭದೊಂದಿಗೆ ಓದಿ · ದಾನಿಯೇಲನು 11

41ಇದಲ್ಲದೆ ಅವನು ರಮ್ಯವಾದ ದೇಶದೊಳಕ್ಕೂ ನುಗ್ಗುವನು; ಅನೇಕ ದೇಶಗಳು ಕೆಡವಲ್ಪಡುವವು; ಆದರೆ ಎದೋಮು, ಮೋವಾಬು ಅಮ್ಮೋನನ ಮಕ್ಕಳಲ್ಲಿ ಮುಖ್ಯಸ್ಥರು ಆತನ ಕೈಯಿಂದ ತಪ್ಪಿಸಿಕೊಳ್ಳುವರು.

42ಅವನು ದೇಶಗಳ ಮೇಲೂ ತನ್ನ ಕೈಯನ್ನು ಚಾಚುವನು; ಐಗುಪ್ತ ದೇಶವು ತಪ್ಪಿಸಿ ಕೊಳ್ಳದು.

43ಬಂಗಾರ ಬೆಳ್ಳಿ ಬೊಕ್ಕಸಗಳ ಮೇಲೆಯೂ ಐಗುಪ್ತದ ಎಲ್ಲಾ ಅಮೂಲ್ಯವಸ್ತುಗಳ ಮೇಲೆಯೂ ಅವನಿಗೆ ಅಧಿಕಾರವಿರುವದು. ಲೂಬ್ಯರೂ ಐಥೋ ಪ್ಯರೂ ಅವನನ್ನು ಹಿಂಬಾಲಿಸುವರು.

44ಮೂಡಣ ದಿಂದಲೂ ಉತ್ತರದಿಂದಲೂ ಬರುವ ಸುದ್ದಿಗಳು ಅವನನ್ನು ಹೆದರಿಸುವವು. ಆದದರಿಂದ ಅವನು ಮಹಾ ಉಗ್ರನಾಗಿ ಅನೇಕರನ್ನು ಸಂಹರಿಸುವದಕ್ಕೂ ನಿರ್ಮೂಲ ಮಾಡುವದಕ್ಕೂ ಹೊರಡುವನು.

45ಅವನು ತನ್ನ ಅರಮನೆಯ ಗುಡಾರಗಳನ್ನು ಸಮು ದ್ರದ ನಡುವೆ ರಮ್ಯವಾದ ಪರಿಶುದ್ಧ ಪರ್ವತದಲ್ಲಿ ಹಾಕುವನು; ಆದರೂ ಅವನು ಕೊನೆಗಾಣುವನು. ಯಾರೂ ಅವನಿಗೆ ಸಹಾಯ ಮಾಡರು.

ದಾನಿಯೇಲನು 11 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी