(ಹೋರೇಬಿನಿಂದ ಕಾದೇಶ್ ಬರ್ನೇಯಕ್ಕೆ ಸೇಯಾರ್ ಬೆಟ್ಟದ ಮಾರ್ಗವಾಗಿ ಹನ್ನೊಂದು ದಿವಸ ಪ್ರಯಾಣ).
1ಮೋಶೆಯು ಎಲ್ಲಾ ಇಸ್ರಾಯೇಲ್ಯರಿಗೆ ಯೊರ್ದನಿನ ಈಚೆಯಲ್ಲಿರುವ ಅರಣ್ಯ ದಲ್ಲಿ, ಕೆಂಪು ಸಮುದ್ರಕ್ಕೆ ಎದುರಾಗಿರುವ ಬೈಲಿನಲ್ಲಿ, ಪಾರಾನ್, ತೋಫೆಲ್, ಲಾಬಾನ್, ಹಚೇರೋತ್, ದೀಜಾಹಾಬ್ ಎಂಬವುಗಳ ಮಧ್ಯದಲ್ಲಿ ಹೇಳಿದ ಮಾತುಗಳು ಇವೇ.
2(ಹೋರೇಬಿನಿಂದ ಕಾದೇಶ್ ಬರ್ನೇಯಕ್ಕೆ ಸೇಯಾರ್ ಬೆಟ್ಟದ ಮಾರ್ಗವಾಗಿ ಹನ್ನೊಂದು ದಿವಸ ಪ್ರಯಾಣ).
3ನಾಲ್ವತ್ತನೇ ವರುಷದಲ್ಲಿ ಹನ್ನೊಂದನೇ ತಿಂಗಳಿನ ಮೊದಲನೇ ದಿವಸದಲ್ಲಿ ಆದದ್ದೇನಂದರೆ, ಮೋಶೆಯು ಇಸ್ರಾಯೇಲ್ ಮಕ್ಕಳಿಗೆ, ಕರ್ತನು ಅವನಿಗೆ ಅವರ ವಿಷಯ ಆಜ್ಞಾಪಿಸಿದ್ದೆಲ್ಲಾದರ ಪ್ರಕಾರ ಮಾತನಾಡಿದನು.
4ಅವನು ಹೆಷ್ಬೋನಿನಲ್ಲಿ ವಾಸಮಾಡಿದ ಅಮೋರಿ ಯರ ಅರಸನಾದ ಸೀಹೋನನನ್ನೂ ಎದ್ರೈಯಲ್ಲಿ ವಾಸಮಾಡಿದ ಬಾಷಾನಿನ ಅರಸನಾದ ಓಗನನ್ನೂ ಅಷ್ಟಾರೋತನಲ್ಲಿ ಕೊಂದನು.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ