ರೂತಳು 1:2

ಆ ಮನುಷ್ಯನ ಹೆಸರು ಎಲೀಮೆಲೆ ಕನು; ಅವನ ಹೆಂಡತಿಯ ಹೆಸರು ನೊವೊಮಿ; ಅವನ ಕುಮಾರ ರಲ್ಲಿ ಒಬ್ಬನ ಹೆಸರು ಮಹ್ಲೋ ನನು, ಮತ್ತೊಬ್ಬನ ಹೆಸರು ಕಿಲ್ಯೋನನು. ಇವರು ಎಫ್ರಾತ್ಯರಾದ ಯೆಹೂದದ ಬೇತ್ಲೆಹೇಮಿನವ ರಾಗಿದ್ದರು. ಇವರು ಮೋವಾಬ್‌ ದೇಶಕ್ಕೆ ಬಂದು, ಅಲ್ಲಿ ವಾಸವಾಗಿದ್ದರು.

ಸಂದರ್ಭದೊಂದಿಗೆ ಓದಿ · ರೂತಳು 1

1ನ್ಯಾಯಾಧಿಪತಿಗಳು ಆಳುತ್ತಿದ್ದ ಆ ದಿನಗಳಲ್ಲಿ ದೇಶದೊಳಗೆ ಬರ ಉಂಟಾ ಗಿದ್ದಾಗ ಆದದ್ದೇನಂದರೆ, ಯೆಹೂದದ ಬೇತ್ಲೆ ಹೇಮಿನವನಾದ ಒಬ್ಬ ಮನುಷ್ಯನು ತನ್ನ ಹೆಂಡ ತಿಯ ಮತ್ತು ತನ್ನ ಇಬ್ಬರು ಕುಮಾರರೊಂದಿಗೆ ಮೋವಾಬ್‌ ದೇಶದಲ್ಲಿ ವಾಸಮಾಡಬೇಕೆಂದು ಹೋದನು.

2ಆ ಮನುಷ್ಯನ ಹೆಸರು ಎಲೀಮೆಲೆ ಕನು; ಅವನ ಹೆಂಡತಿಯ ಹೆಸರು ನೊವೊಮಿ; ಅವನ ಕುಮಾರ ರಲ್ಲಿ ಒಬ್ಬನ ಹೆಸರು ಮಹ್ಲೋ ನನು, ಮತ್ತೊಬ್ಬನ ಹೆಸರು ಕಿಲ್ಯೋನನು. ಇವರು ಎಫ್ರಾತ್ಯರಾದ ಯೆಹೂದದ ಬೇತ್ಲೆಹೇಮಿನವ ರಾಗಿದ್ದರು. ಇವರು ಮೋವಾಬ್‌ ದೇಶಕ್ಕೆ ಬಂದು, ಅಲ್ಲಿ ವಾಸವಾಗಿದ್ದರು.

3ಆದರೆ ನೊವೊಮಿಯ ಗಂಡನಾದ ಎಲೀಮೆಲೆಕನು ಸತ್ತು ಹೋದನು; ಆಕೆಯೂ ಆಕೆಯ ಇಬ್ಬರು ಕುಮಾರರೂ ಉಳಿದರು.

4ಇವರು ಒರ್ಫಾ ರೂತ್‌ ಎಂಬ ಹೆಸರುಗಳುಳ್ಳ ಮೋವಾಬ್‌ ದೇಶದ ಸ್ತ್ರೀಯರನ್ನು ತಮಗೆ ಹೆಂಡತಿ ಯರನ್ನಾಗಿ ತಕ್ಕೊಂಡು ಸುಮಾರು ಹತ್ತು ವರುಷ ಅಲ್ಲಿ ವಾಸವಾಗಿದ್ದರು.

ರೂತಳು 1 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी