ಮಾರ್ಕನು 8:18

ಕಣ್ಣುಗಳಿದ್ದೂ ನೀವು ನೋಡುವದಿಲ್ಲವೋ? ಕಿವಿಗಳಿದ್ದೂ ನೀವು ಕೆಳುವ ದಿಲ್ಲವೋ? ಮತ್ತು ನೀವು ಜ್ಞಾಪಕಮಾಡಿಕೊಳ್ಳುವದಿ ಲ್ಲವೋ?

ಸಂದರ್ಭದೊಂದಿಗೆ ಓದಿ · ಮಾರ್ಕನು 8

16ಆಗ ಅವರು ತಮ್ಮೊಳಗೆ--ನಮಗೆ ರೊಟ್ಟಿ ಇಲ್ಲದಿರುವದರಿಂದಲೇ ಹೀಗೆ ಹೇಳುತ್ತಾನೆಂದು ಅವರು ತರ್ಕಿಸಿಕೊಂಡರು.

17ಯೇಸು ಅದನ್ನು ತಿಳಿದುಕೊಂಡು ಅವರಿಗೆ ಹೇಳಿದ್ದೇನಂದರೆನಿಮ್ಮಲ್ಲಿ ರೊಟ್ಟಿ ಇಲ್ಲವೆಂದು ಯಾಕೆ ತರ್ಕಿಸಿಕೊಳ್ಳುತ್ತೀರಿ? ನೀವು ಇನ್ನೂ ಗ್ರಹಿಸದೆಯೂ ತಿಳಿದುಕೊಳ್ಳದೆಯೂ ಇದ್ದೀರೋ? ನೀವು ನಿಮ್ಮ ಹೃದಯವನ್ನು ಇನ್ನೂ ಕಠಿಣಮಾಡಿಕೊಂಡಿದ್ದಿರೋ?

18ಕಣ್ಣುಗಳಿದ್ದೂ ನೀವು ನೋಡುವದಿಲ್ಲವೋ? ಕಿವಿಗಳಿದ್ದೂ ನೀವು ಕೆಳುವ ದಿಲ್ಲವೋ? ಮತ್ತು ನೀವು ಜ್ಞಾಪಕಮಾಡಿಕೊಳ್ಳುವದಿ ಲ್ಲವೋ?

19ನಾನು ಆ ಐದು ರೊಟ್ಟಿಗಳನ್ನು ಐದು ಸಾವಿರ ಜನರ ಮಧ್ಯದಲ್ಲಿ ಮುರಿದಾಗ ಎಷ್ಟು ಪುಟ್ಟಿಗಳ ತುಂಬ ರೊಟ್ಟಿಯ ತುಂಡುಗಳನ್ನು ಎತ್ತಿದಿರಿ ಎಂದು ಕೇಳಲು ಅವರು ಆತನಿಗೆ--ಹನ್ನೆರಡು ಅಂದರು.

20ಮತ್ತು ಆ ಏಳು ರೊಟ್ಟಿಗಳನ್ನು ನಾಲ್ಕು ಸಾವಿರ ಜನರ ಮಧ್ಯದಲ್ಲಿ ಮುರಿದಾಗ ಎಷ್ಟು ಪುಟ್ಟಿಗಳ ತುಂಬ ತುಂಡುಗಳನ್ನು ಎತ್ತಿದಿರಿ ಎಂದು ಕೇಳಲು ಅವರು--ಏಳು ಅಂದರು.

ಮಾರ್ಕನು 8 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी