೧ ತಿಮೊಥೆಯನಿಗೆ 6:11

ಓ ದೇವರ ಮನುಷ್ಯನೇ, ನೀನಾದರೋ ಇವುಗಳಿಂದ ದೂರ ಓಡಿಹೋಗು; ನೀತಿ ಭಕ್ತಿ ನಂಬಿಕೆ ಪ್ರೀತಿ ತಾಳ್ಮೆ ಸಾತ್ವಿಕತ್ವ ಇವುಗಳನ್ನು ಅನುಸರಿಸು.

ಸಂದರ್ಭದೊಂದಿಗೆ ಓದಿ · ೧ ತಿಮೊಥೆಯನಿಗೆ 6

9ಆದರೆ ಐಶ್ವರ್ಯವಂತರಾಗ ಬೇಕೆಂದು ಮನಸ್ಸು ಮಾಡುವವರು ಶೋಧನೆಯಲ್ಲಿಯೂ ಉರ್ಲಿನಲ್ಲಿಯೂ ಸಿಕ್ಕಿಕೊಂಡು ಅನೇಕ ಬುದ್ಧಿಹೀನತೆಯ ಮತ್ತು ಹಾನಿಕರವಾದ ದುರಾಶೆಗಳಲ್ಲಿ ಬೀಳುತ್ತಾರೆ. ಇಂಥ ಆಶೆಗಳು ಮನುಷ್ಯರನ್ನು ಸಂಹಾರ ನಾಶನಗಳಲ್ಲಿ ಮುಳುಗಿಸುತ್ತವೆ.

10ಹಣದ ಪ್ರೀತಿಯು ಸಕಲ ವಿಧವಾದ ಕೆಟ್ಟತನಕ್ಕೆ ಮೂಲವಾಗಿದೆ. ಕೆಲವರು ಅದಕ್ಕಾಗಿ ಆತುರಪಟ್ಟು ನಂಬಿಕೆಯಿಂದ ತಪ್ಪಿಹೋಗಿ ಅನೇಕ ದುಃಖಗಳಿಂದ ತಮ್ಮನ್ನು ತಾವೇ ತಿವಿಸಿ ಕೊಳ್ಳುತ್ತಾರೆ.

11ಓ ದೇವರ ಮನುಷ್ಯನೇ, ನೀನಾದರೋ ಇವುಗಳಿಂದ ದೂರ ಓಡಿಹೋಗು; ನೀತಿ ಭಕ್ತಿ ನಂಬಿಕೆ ಪ್ರೀತಿ ತಾಳ್ಮೆ ಸಾತ್ವಿಕತ್ವ ಇವುಗಳನ್ನು ಅನುಸರಿಸು.

12ನಂಬಿಕೆಯ ಶ್ರೇಷ್ಠ ಹೋರಾಟವನ್ನು ಮಾಡು, ನಿತ್ಯಜೀವವನ್ನು ಹಿಡಿದುಕೋ; ಅದಕ್ಕಾಗಿಯೇ ನೀನು ಕರೆಯಲ್ಪಟ್ಟಿದ್ದೀ. ನೀನು ಅನೇಕ ಸಾಕ್ಷಿಗಳ ಮುಂದೆ ಒಳ್ಳೇ ಅರಿಕೆಯನ್ನು ಮಾಡಿದ್ದೀಯಲ್ಲಾ.

13ಎಲ್ಲರನ್ನು ಬದುಕಿಸುವ ದೇವರ ಮುಂದೆಯೂ ಪೊಂತ್ಯ ಪಿಲಾತನ ಮುಂದೆ ಶ್ರೇಷ್ಠ ಅರಿಕೆಯನ್ನು ಸಾಕ್ಷೀಕರಿಸಿದ ಕ್ರಿಸ್ತ ಯೇಸುವಿನ ಮುಂದೆಯೂ ನಾನು ನಿನಗೆ ಖಂಡಿತವಾಗಿ ಹೇಳುವದೇನಂದರೆ--

೧ ತಿಮೊಥೆಯನಿಗೆ 6 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी