ಯೆಹೆಜ್ಕೇಲನು 23:27

ಹೀಗೆ ನಾನು ನಿನ್ನ ದುಷ್ಕರ್ಮವನ್ನು ನೀನು ಐಗುಪ್ತದಲ್ಲಿದ್ದಂದಿನಿಂದ ನಡೆಸಿದ ವ್ಯಭಿಚಾರವನ್ನು ನಿನ್ನಿಂದ ತೊಲಗಿಸುವೆನು; ಆಮೇಲೆ ನೀನು ಅವರ ಕಡೆಗೆ ಕಣ್ಣೆತ್ತದೆ, ಐಗುಪ್ತವನ್ನು ಜ್ಞಾಪಕಕ್ಕೆ ತರದೇ ಇರುವಿ.

ಸಂದರ್ಭದೊಂದಿಗೆ ಓದಿ · ಯೆಹೆಜ್ಕೇಲನು 23

25ಇದಲ್ಲದೆ ನನ್ನ ಅಸೂಯೆಯನ್ನು ನಿನಗೆ ವಿರುದ್ಧವಾಗಿ ಬರಮಾಡುವೆನು; ಅವರು ನಿನ್ನಲ್ಲಿ ಕೋಪತೀರಿಸಿ ಕೊಳ್ಳುವರು; ನಿನ್ನ ಮೂಗನ್ನೂ ಕಿವಿಗಳನ್ನೂ ತೆಗೆದು ಹಾಕುವರು; ನಿನ್ನಲ್ಲಿ ಉಳಿದವರು ಕತ್ತಿಯಿಂದ ಬೀಳು ವರು; ನಿನ್ನ ಗಂಡು ಹೆಣ್ಣು ಮಕ್ಕಳನ್ನು ಅಪಹರಿಸುವರು; ನಿನ್ನಲ್ಲಿ ಉಳಿದವರೆಲ್ಲರೂ ಅಗ್ನಿಗೆ ಆಹುತಿಯಾಗುವರು.

26ಇದಲ್ಲದೆ ನಿನ್ನ ವಸ್ತ್ರಗಳನ್ನು ತೆಗೆದುಹಾಕಿ, ನಿನ್ನ ಸೌಂದರ್ಯದ ಒಡವೆಗಳನ್ನು ಕಸಿದುಕೊಳ್ಳುವರು;

27ಹೀಗೆ ನಾನು ನಿನ್ನ ದುಷ್ಕರ್ಮವನ್ನು ನೀನು ಐಗುಪ್ತದಲ್ಲಿದ್ದಂದಿನಿಂದ ನಡೆಸಿದ ವ್ಯಭಿಚಾರವನ್ನು ನಿನ್ನಿಂದ ತೊಲಗಿಸುವೆನು; ಆಮೇಲೆ ನೀನು ಅವರ ಕಡೆಗೆ ಕಣ್ಣೆತ್ತದೆ, ಐಗುಪ್ತವನ್ನು ಜ್ಞಾಪಕಕ್ಕೆ ತರದೇ ಇರುವಿ.

28ದೇವರಾದ ಕರ್ತನು ಹೀಗೆ ಹೇಳುತ್ತಾನೆ --ಇಗೋ, ನೀನು ಹಗೆಮಾಡುವವರ ಕೈಯಲ್ಲಿಯೂ ಯಾರ ಕಡೆಯಿಂದ ನಿನ್ನ ಮನಸ್ಸು ಅಗಲಿ ಹೋಯಿತೋ ಅವರ ಕೈಯಲ್ಲಿಯೂ ನಿನ್ನನ್ನು ಒಪ್ಪಿಸುತ್ತೇನೆ.

29ಅವರು ನಿನ್ನ ವಿಷಯದಲ್ಲಿ ಹಗೆಯವರಾಗಿ ನಡೆಯುವರು; ನಿನ್ನ ಕಷ್ಟಾರ್ಜಿತವನ್ನು ತೆಗೆದುಕೊಂಡು ನಿನ್ನನ್ನು ಬೆತ್ತಲೆಯಾಗಿಯೂ ಬರಿದಾಗಿಯೂ ಮಾಡಿ ಬಿಡುವರು. ಆಗ ನಿನ್ನ ವ್ಯಭಿಚಾರವೂ ದುಷ್ಕರ್ಮವೂ ಜಾರತ್ವವೂ ಪ್ರಕಟವಾಗುವದು.

ಯೆಹೆಜ್ಕೇಲನು 23 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी