ಪರಲೋಕದಲ್ಲಿ ನೀನು ಅವರ ಪ್ರಾರ್ಥನೆಯನ್ನೂ ವಿಜ್ಞಾಪನೆಯನ್ನೂ ಕೇಳಿ ಅವರ ನ್ಯಾಯವನ್ನು ತೀರಿಸು.
43ಅವನು ಬಂದು ಈ ಮಂದಿರದ ಕಡೆಗೆ ಪ್ರಾರ್ಥನೆ ಮಾಡಿದರೆ ನಿನ್ನ ಜನರಾದ ಇಸ್ರಾಯೇಲ್ಯರ ಹಾಗೆ ಭೂಲೋಕದಲ್ಲಿರುವ ಸಮಸ್ತರು ನಿನಗೆ ಭಯಪಡುವದಕ್ಕಾಗಿ ನಿನ್ನ ಹೆಸರನ್ನು ತಿಳಿಯುವ ಹಾಗೆಯೂ ನಾನು ಕಟ್ಟಿಸಿದ ಈ ಮನೆಯು ನಿನ್ನ ಹೆಸರಿನಿಂದ ಕರೆಯಲ್ಪಟ್ಟಿದೆ ಎಂದು ಅವರು ತಿಳಿಯುವ ಹಾಗೆಯೂ ನಿನ್ನ ನಿವಾಸವಾಗಿರುವ ಪರಲೋಕದಿಂದ ಕೇಳಿ ಪರದೇಶಸ್ಥನು ನಿನಗೆ ಕೂಗಿದ ಪ್ರಕಾರ ಮಾಡು.
44ನಿನ್ನ ಜನರು ನೀನು ಕಳುಹಿಸುವ ಯಾವ ಸ್ಥಳದಲ್ಲಾದರೂ ತಮ್ಮ ಶತ್ರುಗಳ ಸಂಗಡ ಯುದ್ಧವನ್ನು ಮಾಡಲು ಹೊರಟುಹೋಗಿ ನೀನು ಆದುಕೊಂಡ ಪಟ್ಟಣದ ಮಾರ್ಗವಾಗಿಯೂ ನಾನು ನಿನ್ನ ಹೆಸರಿ ಗೋಸ್ಕರ ಕಟ್ಟಿಸಿದ ಈ ಮನೆಯ ಮಾರ್ಗವಾಗಿಯೂ ಅವರು ಕರ್ತನಾದ ನಿನಗೆ ಪ್ರಾರ್ಥನೆ ಮಾಡಿದಾಗ
45ಪರಲೋಕದಲ್ಲಿ ನೀನು ಅವರ ಪ್ರಾರ್ಥನೆಯನ್ನೂ ವಿಜ್ಞಾಪನೆಯನ್ನೂ ಕೇಳಿ ಅವರ ನ್ಯಾಯವನ್ನು ತೀರಿಸು.
46ಪಾಪವನ್ನು ಮಾಡದವನು ಯಾವನೂ ಇಲ್ಲದ್ದ ರಿಂದ ಅವರು ನಿನಗೆ ವಿರೋಧವಾಗಿ ಪಾಪ ಮಾಡಲು ನೀನು ಅವರ ಮೇಲೆ ಕೋಪಿಸಿಕೊಂಡು ದೂರವಾ ದರೂ ಸವಿಾಪವಾದರೂ ಶತ್ರುವಿನ ದೇಶಕ್ಕೆ ಅವರು ಸೆರೆಯಾಗಿ ಒಯ್ಯಲ್ಪಡುವ ಹಾಗೆ ನೀನು ಅವರನ್ನು ಶತ್ರುವಿನ ಕೈಯಲ್ಲಿ ಒಪ್ಪಿಸಿದರೆ
47ಅವರು ಸೆರೆ ಒಯ್ಯಲ್ಪಟ್ಟ ದೇಶದಲ್ಲಿ ಪಶ್ಚಾತ್ತಾಪಪಟ್ಟು ತಿರುಗಿ ಕೊಂಡು ತಾವು ಪಾಪಮಾಡಿ ವಕ್ರಬುದ್ಧಿಯಿಂದ ನಡೆದು ದ್ರೋಹಮಾಡಿದೆವೆಂದು ತಮ್ಮನ್ನು ಸೆರೆಯಾಗಿ ಒಯ್ಯುವವರ ದೇಶದಲ್ಲಿ ನಿನಗೆ ವಿಜ್ಞಾಪನೆಮಾಡಿ ಅವರನ್ನು ಸೆರೆಯಾಗಿ ಒಯ್ದ ಶತ್ರುಗಳ ದೇಶದಲ್ಲಿ ತಮ್ಮ ಪೂರ್ಣಹೃದಯದಿಂದಲೂ
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ