ಕೀರ್ತನೆಗಳು 40:3

ನನ್ನ ಬಾಯಲ್ಲಿ ನೂತನ ಹಾಡನ್ನು ಇಟ್ಟಿದ್ದಾನೆ; ಅದು ನಮ್ಮ ದೇವರ ಸ್ತೋತ್ರವೇ; ಅನೇಕರು ಇದನ್ನು ನೋಡಿ ಭಯಪಟ್ಟು ಕರ್ತನಲ್ಲಿ ಭರವಸವಿಡುವರು.

ಸಂದರ್ಭದೊಂದಿಗೆ ಓದಿ · ಕೀರ್ತನೆಗಳು 40

1ನಾನು ಕರ್ತನಿಗಾಗಿ ತಾಳ್ಮೆಯಿಂದ ಕಾದಿದ್ದೆನು; ಆತನು ಕಿವಿಗೊಟ್ಟು ನನ್ನ ಮೊರೆ ಯನ್ನು ಲಕ್ಷಿಸಿದನು.

2ಆತನು ನನ್ನನ್ನು ನಾಶನದ ಕುಣಿಯಿಂದಲೂ ಮತ್ತು ಬುರುದೆಯ ಕೆಸರಿನಿಂದಲೂ ಎತ್ತಿ ನನ್ನ ಪಾದಗಳನ್ನು ಬಂಡೆಯ ಮೇಲೆ ನಿಲ್ಲಿಸಿ ನನ್ನ ಹೆಜ್ಜೆಗಳನ್ನು ಸ್ಥಿರಪಡಿಸಿದನು.

3ನನ್ನ ಬಾಯಲ್ಲಿ ನೂತನ ಹಾಡನ್ನು ಇಟ್ಟಿದ್ದಾನೆ; ಅದು ನಮ್ಮ ದೇವರ ಸ್ತೋತ್ರವೇ; ಅನೇಕರು ಇದನ್ನು ನೋಡಿ ಭಯಪಟ್ಟು ಕರ್ತನಲ್ಲಿ ಭರವಸವಿಡುವರು.

4ಕರ್ತನನ್ನು ತನ್ನ ಭರವಸವಾಗಿ ಮಾಡಿಕೊಂಡು ಅಹಂಕಾರಿಗಳನ್ನು ಗೌರವಿಸದೆಯೂ ಇಲ್ಲವೆ ಸುಳ್ಳಿನ ಕಡೆಗೆ ತಿರುಗಿಕೊಳ್ಳ ದೆಯೂ ಇರುವ ಮನುಷ್ಯನು ಧನ್ಯನು.

5ಓ ನನ್ನ ದೇವರಾದ ಕರ್ತನೇ, ನೀನು ಮಾಡಿದ ನಿನ್ನ ಅದ್ಭುತ ಕಾರ್ಯಗಳೂ ನಮ್ಮ ಕಡೆಗಿರುವ ನಿನ್ನ ಯೋಚನೆಗಳೂ ಬಹಳ; ಅವುಗಳನ್ನು ಕ್ರಮವಾಗಿ ನಿನ್ನ ಮುಂದೆ ಎಣಿಸಲಾರೆನು; ಅವುಗಳನ್ನು ನಾನು ತಿಳಿಸಿ ಹೇಳಬೇಕಾದರೆ ಎಣಿಸುವದಕ್ಕಿಂತ ಹೆಚ್ಚಾಗಿವೆ.

ಕೀರ್ತನೆಗಳು 40 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी