ಯೆಹೋಶುವ 1:12

ಇದಲ್ಲದೆ ಯೆಹೋಶುವನು ರೂಬೇನ್ಯರಿಗೂ ಗಾದ್ಯರಿಗೂ ಮನಸ್ಸೆಯ ಅರ್ಧಗೋತ್ರದವರಿಗೂ ಹೇಳಿದ್ದೇನಂದರೆ --

ಸಂದರ್ಭದೊಂದಿಗೆ ಓದಿ · ಯೆಹೋಶುವ 1

10ಆಗ ಯೆಹೋಶುವನು ಜನರ ಅಧಿಕಾರಿಗಳಿಗೆ ಆಜ್ಞಾಪಿಸಿ--

11ನೀವು ದಂಡಿನ ಮಧ್ಯದಲ್ಲಿ ಹೋಗಿ ಜನರಿಗೆ ಆಜ್ಞಾಪಿಸಿ ಹೇಳಬೇಕಾದದ್ದೇನಂದರೆ--ನಿಮ ಗೋಸ್ಕರ ಆಹಾರವನ್ನು ಸಿದ್ಧಮಾಡಿಕೊಳ್ಳಿರಿ; ನಿಮ್ಮ ದೇವರಾದ ಕರ್ತನು ನಿಮಗೆ ಸ್ವಾಸ್ತ್ಯಕ್ಕಾಗಿ ಕೊಟ್ಟಿರುವ ದೇಶವನ್ನು ನೀವು ಸ್ವಾಧೀನಮಾಡಿಕೊಳ್ಳಲು ಇನ್ನು ಮೂರು ದಿವಸಗಳಲ್ಲಿ ಯೊರ್ದನನ್ನು ದಾಟಿ ಹೋಗ ಬೇಕು ಅಂದನು.

12ಇದಲ್ಲದೆ ಯೆಹೋಶುವನು ರೂಬೇನ್ಯರಿಗೂ ಗಾದ್ಯರಿಗೂ ಮನಸ್ಸೆಯ ಅರ್ಧಗೋತ್ರದವರಿಗೂ ಹೇಳಿದ್ದೇನಂದರೆ --

13ಕರ್ತನ ಸೇವಕನಾದ ಮೋಶೆಯು ನಿಮಗೆ ಆಜ್ಞಾಪಿಸಿದ ವಾಕ್ಯವನ್ನು ಜ್ಞಾಪಕ ಮಾಡಿಕೊಳ್ಳಿರಿ. ನಿಮ್ಮ ದೇವರಾದ ಕರ್ತನು ನಿಮ್ಮನ್ನು ವಿಶ್ರಾಂತಿಪಡಿಸಿ ನಿಮಗೆ ಈ ದೇಶವನ್ನು ಕೊಟ್ಟನು.

14ಹೇಗಂದರೆ ನಿಮ್ಮ ಹೆಂಡತಿಯರೂ ಚಿಕ್ಕವರೂ ಪಶುಗಳೂ ಮೋಶೆ ನಿಮಗೆ ಕೊಟ್ಟ ಯೊರ್ದನಿಗೆ ಈಚೆ ಇರುವ ದೇಶದಲ್ಲೇ ಇರಲಿ; ಆದರೆ ನಿಮ್ಮಲ್ಲಿ ಇರುವ ಪರಾಕ್ರಮಶಾಲಿಗಳೆಲ್ಲಾ ನಿಮ್ಮ ಸಹೋದರರ ಮುಂದೆ ಯುದ್ಧಸನ್ನದ್ಧರಾಗಿ ನಡೆದುಹೋಗಿ

ಯೆಹೋಶುವ 1 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी