ಮಲಾಕಿಯ 1:6

ಮಗನು ತಂದೆಯನ್ನು ದಾಸನು ಯಜಮಾನನನ್ನು ಸನ್ಮಾನಿಸುತ್ತಾನೆ; ನಾನು ತಂದೆಯಾಗಿದ್ದರೆ ನನ್ನ ಸನ್ಮಾನ ವೆಲ್ಲಿ? ನಾನು ಯಜಮಾನನಾಗಿದ್ದರೆ ನನ್ನ ಭಯವು ಎಲ್ಲಿ ಎಂದು ನನ್ನ ಹೆಸರನ್ನು ಅಸಡ್ಡೆ ಮಾಡುವ ಯಾಜಕರಾದ ನಿಮಗೆ ಸೈನ್ಯಗಳ ಕರ್ತನು ಹೇಳುತ್ತಾನೆ. ಆದರೆ ನೀವು--ನಿನ್ನ ಹೆಸರನ್ನು ಯಾವದರಲ್ಲಿ ನಾವು ಅಸಡ್ಡೆ ಮಾಡಿದ್ದೇವೆಂದು ಹೇಳುತ್ತೀರಿ.

ಸಂದರ್ಭದೊಂದಿಗೆ ಓದಿ · ಮಲಾಕಿಯ 1

4ಎದೋಮು--ನಾವು ಬಡಕಲಾದೆವು, ಆದರೆ ನಾವು ತಿರಿಗಿಕೊಂಡು ಹಾಳಾದ ಸ್ಥಳಗಳನ್ನು ಕಟ್ಟುವೆವೆಂದು ಹೇಳಿದರೂ ಸೈನ್ಯಗಳ ಕರ್ತನು ಹೀಗೆ ಹೇಳುತ್ತಾನೆ--ಅವರು ಕಟ್ಟಬಹುದು, ಆದರೆ ನಾನು ಕೆಡವಿಬಿಡುವೆನು; ಅದಕ್ಕ ವರು--ದುಷ್ಟತನದ ಮೇರೆಯೂ ಕರ್ತನ ನಿತ್ಯ ಕೋಪದ ಜನಾಂಗವೆಂದೂ ಕರೆಯುವರು.

5ನಿಮ್ಮ ಕಣ್ಣುಗಳು ನೋಡುವವು; ಇಸ್ರಾಯೇಲಿನ ಮೇರೆ ಯಿಂದ ಕರ್ತನು ಘನಹೊಂದುವನು ಎಂದು ನೀವು ಹೇಳುವಿರಿ.

6ಮಗನು ತಂದೆಯನ್ನು ದಾಸನು ಯಜಮಾನನನ್ನು ಸನ್ಮಾನಿಸುತ್ತಾನೆ; ನಾನು ತಂದೆಯಾಗಿದ್ದರೆ ನನ್ನ ಸನ್ಮಾನ ವೆಲ್ಲಿ? ನಾನು ಯಜಮಾನನಾಗಿದ್ದರೆ ನನ್ನ ಭಯವು ಎಲ್ಲಿ ಎಂದು ನನ್ನ ಹೆಸರನ್ನು ಅಸಡ್ಡೆ ಮಾಡುವ ಯಾಜಕರಾದ ನಿಮಗೆ ಸೈನ್ಯಗಳ ಕರ್ತನು ಹೇಳುತ್ತಾನೆ. ಆದರೆ ನೀವು--ನಿನ್ನ ಹೆಸರನ್ನು ಯಾವದರಲ್ಲಿ ನಾವು ಅಸಡ್ಡೆ ಮಾಡಿದ್ದೇವೆಂದು ಹೇಳುತ್ತೀರಿ.

7ನನ್ನ ಬಲಿಪೀಠದ ಮೇಲೆ ಅಪವಿತ್ರವಾದ ರೊಟ್ಟಿಯನ್ನು ಅರ್ಪಿಸಿ--ಯಾವದರಲ್ಲಿ ನಿನ್ನನ್ನು ನಾವು ಅಪವಿತ್ರ ಮಾಡಿದ್ದೇವೆಂದು ಹೇಳುತ್ತೀರಿ. ಕರ್ತನ ಮೇಜು ಹೀನವಾದದ್ದೆಂದು ನೀವು ಹೇಳುವದರಿಂದಲೇ.

8ಇದ ಲ್ಲದೆ ನೀವು ಕುರುಡಾದದ್ದನ್ನು ಬಲಿಗಾಗಿ ಅರ್ಪಿಸಿ ದರೆ ಅದು ಕೆಟ್ಟದ್ದಲ್ಲವೋ? ಕುಂಟಾದದ್ದನ್ನೂ ರೋಗ ವುಳ್ಳದ್ದನ್ನೂ ಅರ್ಪಿಸಿದರೆ ಅದು ಕೆಟ್ಟದ್ದಲ್ಲವೋ? ಸೈನ್ಯ ಗಳ ಕರ್ತನು--ಅದನ್ನು ನಿನ್ನ ದೊರೆಗೆ ಅರ್ಪಿಸು, ಅವನು ನಿನಗೆ ಮೆಚ್ಚುವನೋ? ಇಲ್ಲವೆ ನಿನಗೆ ಮುಖ ದಾಕ್ಷಿಣ್ಯ ತೋರಿಸುವನೋ?

ಮಲಾಕಿಯ 1 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी