ದೇವರಾದ ಕರ್ತನು ಹೀಗೆ ಹೇಳುತ್ತಾನೆ--ಯಾವಾಗ ಸಂಪೂರ್ಣ ಭೂಮಿಯು ಸಂತೋಷಪಡು ತ್ತದೋ ಆಗ ನಾನು ನಿನ್ನನ್ನು ಹಾಳುಮಾಡುವೆನು.
12ಆಗ ನಾನೇ ಕರ್ತನೆಂದು ನೀನು ತಿಳಿಯುವಿ ಮತ್ತು ಇಸ್ರಾಯೇಲಿನ ಪರ್ವತಗಳ ವಿಷಯವಾಗಿ--ಅವು ಹಾಳಾಗಿವೆ ನಮಗೆ ಆಹಾರವಾಗಿ ಕೊಡಲ್ಪಟ್ಟಿವೆ ಎಂದು ಹೇಳಿ ಮಾತ ನಾಡಿದ ನಿನ್ನ ಎಲ್ಲಾ ದೂಷಣೆಗಳನ್ನು ಕೇಳಿರುವೆನೆಂದು ತಿಳಿಯುವಿ.
13ಹೀಗೆ ನಿಮ್ಮ ಬಾಯಿಂದ ನೀವು ನನಗೆ ವಿರೋಧವಾಗಿ ಕೊಚ್ಚಿದ್ದನ್ನೂ ನನಗೆ ವಿರೋಧವಾಗಿ ನಿಮ್ಮ ಮಾತುಗಳಿಂದ ಹೆಚ್ಚಿಸಿದ್ದನ್ನೂ ನಾನು ಕೇಳಿದ್ದೇನೆ.
14ದೇವರಾದ ಕರ್ತನು ಹೀಗೆ ಹೇಳುತ್ತಾನೆ--ಯಾವಾಗ ಸಂಪೂರ್ಣ ಭೂಮಿಯು ಸಂತೋಷಪಡು ತ್ತದೋ ಆಗ ನಾನು ನಿನ್ನನ್ನು ಹಾಳುಮಾಡುವೆನು.
15ಹೇಗೆ ನೀನು ಇಸ್ರಾಯೇಲ್ಯರ ಸ್ವಾತಂತ್ರ್ಯದ ನಾಶನಕ್ಕೆ ಸಂತೋಷಪಟ್ಟೆಯೋ ಹಾಗೆಯೇ ನಿನ್ನ ನಾಶನಕ್ಕೆ ಸಂತೋಷಪಡುವ ಹಾಗೆ ಮಾಡುವೆನು. ಓ ಸೇಯಾರ್ ಪರ್ವತವೇ ಮತ್ತು ಸಮಸ್ತ ಎದೋಮೇಸಂಪೂರ್ಣವಾಗಿ ಹಾಳಾಗುವಿ; ಆಗ ನಾನೇ ಕರ್ತ ನೆಂದು ನಿಮಗೆ ತಿಳಿಯುವದು.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ