ಧರ್ಮೋಪದೇಶಕಾಂಡ 16:3

ಅದರಲ್ಲಿ ಹುಳಿ ರೊಟ್ಟಿಯನ್ನು ತಿನ್ನಬಾರದು. ಏಳು ದಿವಸ ಹುಳಿ ಇಲ್ಲದ ಶ್ರಮೆಯ ರೊಟ್ಟಿಗಳನ್ನು ಅದರಲ್ಲಿ ತಿನ್ನಬೇಕು; ತ್ವರೆಯಾಗಿ ಐಗುಪ್ತದೇಶದೊಳಗಿಂದ ನೀನು ಹೊರಗೆ ಬಂದಿ; ಆದಕಾರಣ ನೀನು ಐಗುಪ್ತದೇಶದೊಳಗಿಂದ ಹೊರಗೆ ಬಂದ ದಿವಸವನ್ನು ನೀನು ಜೀವಿಸುವ ದಿವಸ ಗಳಲ್ಲೆಲ್ಲಾ ಜ್ಞಾಪಕಮಾಡಬೇಕು.

ಸಂದರ್ಭದೊಂದಿಗೆ ಓದಿ · ಧರ್ಮೋಪದೇಶಕಾಂಡ 16

1ಆಬೀಬ್‌ ತಿಂಗಳನ್ನು ಆಚರಿಸು. ಅದರಲ್ಲಿ ನಿನ್ನ ದೇವರಾದ ಕರ್ತನಿಗೆ ಪಸ್ಕವನ್ನು ಆಚರಿಸಬೇಕು; ಯಾಕಂದರೆ ಆಬೀಬ್‌ ತಿಂಗಳಿನಲ್ಲಿ ನಿನ್ನ ದೇವರಾದ ಕರ್ತನು ನಿನ್ನನ್ನು ರಾತ್ರಿಯಲ್ಲಿ ಐಗುಪ್ತ ದೊಳಗಿಂದ ಹೊರಗೆ ಬರಮಾಡಿದನು;

2ಹೀಗಿರುವ ದರಿಂದ ಕರ್ತನು ತನ್ನ ಹೆಸರನ್ನು ಸ್ಥಾಪಿಸುವದಕ್ಕೆ ಆದುಕೊಳ್ಳುವ ಸ್ಥಳದಲ್ಲಿ ನಿನ್ನ ದೇವರಾದ ಕರ್ತನಿಗೆ ಕುರಿಪಶುಗಳ ಪಸ್ಕವನ್ನು ಅರ್ಪಿಸಬೇಕು.

3ಅದರಲ್ಲಿ ಹುಳಿ ರೊಟ್ಟಿಯನ್ನು ತಿನ್ನಬಾರದು. ಏಳು ದಿವಸ ಹುಳಿ ಇಲ್ಲದ ಶ್ರಮೆಯ ರೊಟ್ಟಿಗಳನ್ನು ಅದರಲ್ಲಿ ತಿನ್ನಬೇಕು; ತ್ವರೆಯಾಗಿ ಐಗುಪ್ತದೇಶದೊಳಗಿಂದ ನೀನು ಹೊರಗೆ ಬಂದಿ; ಆದಕಾರಣ ನೀನು ಐಗುಪ್ತದೇಶದೊಳಗಿಂದ ಹೊರಗೆ ಬಂದ ದಿವಸವನ್ನು ನೀನು ಜೀವಿಸುವ ದಿವಸ ಗಳಲ್ಲೆಲ್ಲಾ ಜ್ಞಾಪಕಮಾಡಬೇಕು.

4ಏಳು ದಿವಸ ಹುಳಿ ಕಲಸಿದ ರೊಟ್ಟಿ ನಿನ್ನ ಮೇರೆಗಳಲ್ಲೆಲ್ಲೂ ಕಾಣಬಾರದು. ಮೊದಲನೇ ದಿನದ ಸಾಯಂಕಾಲದಲ್ಲಿ ನೀನು ಕೊಯ್ದ ಮಾಂಸದಲ್ಲಿ ಏನಾದರೂ ಮರು ದಿವಸದ ವರೆಗೆ ಉಳಿಸಬಾರದು.

5ನಿನ್ನ ದೇವರಾದ ಕರ್ತನು ನಿನಗೆ ಕೊಡುವ ದ್ವಾರಗಳ ಯಾವದೊಂದರಲ್ಲಾದರೂ ನೀನು ಪಸ್ಕವನ್ನು ಅರ್ಪಿಸ ಬಾರದು.

ಧರ್ಮೋಪದೇಶಕಾಂಡ 16 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी