ಯೆಹೆಜ್ಕೇಲನು 20:24

ಅವರು ನನ್ನ ನ್ಯಾಯಗಳಲ್ಲಿ ನಡೆಯದೆ, ನನ್ನ ನಿಯಮಗಳನ್ನು ಅಲಕ್ಷಿಸಿ ನನ್ನ ಸಬ್ಬತ್ತುಗಳನ್ನು ಅಪವಿತ್ರಪಡಿಸಿದರು; ತಮ್ಮ ಪಿತೃಗಳ ವಿಗ್ರಹಗಳ ಕಡೆಗೆ ಕಣ್ಣಿಟ್ಟಿದ್ದರು.

ಸಂದರ್ಭದೊಂದಿಗೆ ಓದಿ · ಯೆಹೆಜ್ಕೇಲನು 20

22ಆದಾಗ್ಯೂ ನಾನು ನನ್ನ ಕೈಯನ್ನು ಹಿಂತೆಗೆದು ನಾನು ಅವರನ್ನು ಯಾರ ಕಣ್ಣುಗಳ ಮುಂದೆ ಹೊರಗೆ ಬರಮಾಡಿದೆನೋ ಆ ಅನ್ಯಜನಾಂಗ ಗಳ ದೃಷ್ಟಿಯಲ್ಲಿ ನನ್ನ ಹೆಸರು ಅಪವಿತ್ರವಾಗದ ಹಾಗೆ ನನ್ನ ಹೆಸರಿಗೋಸ್ಕರವೇ ಕೆಲಸ ಮಾಡಿದೆನು.

23ನಾನು ಅವರನ್ನು ಅನ್ಯಜನಾಂಗಗಳಲ್ಲಿ ಚದರಿಸುತ್ತೇನೆಂದೂ ದೇಶಗಳಲ್ಲಿ ಹರಡಿಸುತ್ತೇನೆಂದೂ ಅರಣ್ಯದಲ್ಲಿ ಅವರ ಮೇಲೆ ಕೈ ಎತ್ತಿದೆನು;

24ಅವರು ನನ್ನ ನ್ಯಾಯಗಳಲ್ಲಿ ನಡೆಯದೆ, ನನ್ನ ನಿಯಮಗಳನ್ನು ಅಲಕ್ಷಿಸಿ ನನ್ನ ಸಬ್ಬತ್ತುಗಳನ್ನು ಅಪವಿತ್ರಪಡಿಸಿದರು; ತಮ್ಮ ಪಿತೃಗಳ ವಿಗ್ರಹಗಳ ಕಡೆಗೆ ಕಣ್ಣಿಟ್ಟಿದ್ದರು.

25ಆದಕಾರಣ ನಾನು ಅವರಿಗೆ ಅಹಿತವಾದ ನಿಯಮಗಳನ್ನೂ ಅವರು ಬದುಕಬಾರದ ನ್ಯಾಯಗಳನ್ನೂ ಕೊಟ್ಟೆನು.

26ನಾನೇ ಕರ್ತನೆಂದು ಅವರು ತಿಳಿಯುವ ಹಾಗೆ ಅವರು ತಮ್ಮ ಚೊಚ್ಚಲು ಮಕ್ಕಳನ್ನು ಬೆಂಕಿಗೆ ಆಹುತಿಮಾಡಿದ್ದರಿಂದ ಅವರು ಹಾಳಾಗಿ ಬಿದ್ದಿರುವಂತೆ ನಾನು ಅವರ ಅರ್ಪಣೆಗಳನ್ನು ಅಪವಿತ್ರಪಡಿಸಿದೆನು.

ಯೆಹೆಜ್ಕೇಲನು 20 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी