ಯೆಹೆಜ್ಕೇಲನು 10:18

ಆಗ ಕರ್ತನ ಮಹಿಮೆಯು ಆಲಯದ ಹೊಸ್ತಿಲನ್ನು ಬಿಟ್ಟು ಕೆರೂಬಿಯರ ಮೇಲೆ ನಿಂತಿತು.

ಸಂದರ್ಭದೊಂದಿಗೆ ಓದಿ · ಯೆಹೆಜ್ಕೇಲನು 10

16ಕೆರೂಬಿಯರು ಹೋದಾಗ, ಚಕ್ರಗಳು ಅವರ ಸಂಗಡ ಹೋದವು. ಕೆರೂಬಿಯರು ಭೂಮಿಯನ್ನು ಬಿಟ್ಟು ಮೇಲೇರುವಾಗ ತಮ್ಮ ರೆಕ್ಕೆಗಳನ್ನು ಚಾಚಿದಾಗ, ಅವರ ಚಕ್ರಗಳು ಪಕ್ಕಕ್ಕೆ ತಿರುಗಲಿಲ್ಲ.

17ಅವು ನಿಂತಾಗ ಇವೂ ನಿಂತವು. ಅವು ಎತ್ತಲ್ಪಟ್ಟಾಗ ಇವೂ ಅವುಗಳ ಸಂಗಡ ಎತ್ತಲ್ಪಟ್ಟವು; ಯಾಕಂದರೆ ಇವುಗಳಲ್ಲಿ ಆ ಜೀವಿಗಳ ಆತ್ಮವು ಇತ್ತು.

18ಆಗ ಕರ್ತನ ಮಹಿಮೆಯು ಆಲಯದ ಹೊಸ್ತಿಲನ್ನು ಬಿಟ್ಟು ಕೆರೂಬಿಯರ ಮೇಲೆ ನಿಂತಿತು.

19ಕೆರೂಬಿಯರು ತಮ್ಮ ರೆಕ್ಕೆಗಳನ್ನು ಎತ್ತಿ ಕೊಂಡು ನಾನು ನೋಡುವಾಗಲೇ ಭೂಮಿಯನ್ನು ಬಿಟ್ಟು ಮೇಲೆಕ್ಕೇರಿ ಹೋದರು. ಅವು ಹೊರಟಾಗ ಚಕ್ರಗಳೂ ಅವರ ಸಂಗಡ ಇದ್ದವು, ಅವರು ಕರ್ತನ ಆಲಯದ ಮೂಡಣ ಬಾಗಲಿನ ದ್ವಾರದ ಬಳಿಯಲ್ಲಿ ನಿಂತಿದ್ದರು. ಮತ್ತು ಇಸ್ರಾಯೇಲಿನ ದೇವರ ಮಹಿ ಮೆಯು ಅವರ ಮೇಲೆ ಇತ್ತು.

20ಕೆಬಾರ್‌ ನದಿಯ ಬಳಿಯಲ್ಲಿ ನಾನು ನೋಡಿದ ಜೀವಿಯು ಇದೇ. ಅವು ಕೆರೂಬಿಯರೆಂದು ತಿಳಿದುಕೊಂಡೆನು.

ಯೆಹೆಜ್ಕೇಲನು 10 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी