ಆತನ ಹಿಂದೆ ಬಂದು ಆತನ ಉಡುಪಿನ ಅಂಚನ್ನು ಮುಟ್ಟಿದಳು; ಕೂಡಲೆ ಆಕೆಯ ರಕ್ತಸ್ರಾವವು ನಿಂತುಹೋಯಿತು.
42ಯಾಕಂದರೆ ಅವನಿ ಗಿದ್ದ ಹೆಚ್ಚು ಕಡಿಮೆ ಹನ್ನೆರಡು ವರುಷದವಳಾದ ಒಬ್ಬಳೇ ಮಗಳು ಸಾಯುವಹಾಗಿದ್ದಳು. ಆದರೆ ಆತನು ಹೋಗುತ್ತಿದ್ದಾಗ ಜನರು ಆತನನ್ನು ನೂಕಾ ಡುತ್ತಿದ್ದರು.
43ಆಗ ಹನ್ನೆರಡು ವರುಷಗಳಿಂದಲೂ ರಕ್ತಸ್ರಾವ ರೋಗವಿದ್ದು ತನ್ನ ಜೀವನಕ್ಕೆ ಇದ್ದದ್ದನ್ನು ವೈದ್ಯರಿಗೆ ವೆಚ್ಚಮಾಡಿದ್ದಾಗ್ಯೂ ಯಾರಿಂದಲೂ ವಾಸಿಯಾಗದೆ ಇದ್ದ ಒಬ್ಬ ಸ್ತ್ರೀಯು
44ಆತನ ಹಿಂದೆ ಬಂದು ಆತನ ಉಡುಪಿನ ಅಂಚನ್ನು ಮುಟ್ಟಿದಳು; ಕೂಡಲೆ ಆಕೆಯ ರಕ್ತಸ್ರಾವವು ನಿಂತುಹೋಯಿತು.
45ಆಗ ಯೇಸು--ನನ್ನನ್ನು ಮುಟ್ಟಿದವರು ಯಾರು ಅಂದನು. ಎಲ್ಲರೂ ಅಲ್ಲಗಳೆದಾಗ ಪೇತ್ರನು ಮತ್ತು ಅವನ ಕೂಡ ಇದ್ದವರು ಆತನಿಗೆ--ಬೋಧಕನೇ, ಸಮೂಹವು ನಿನ್ನನ್ನು ನೂಕುತ್ತಾ ನಿನ್ನ ಮೇಲೆ ಬೀಳುತ್ತಿರಲಾಗಿ ನೀನು--ನನ್ನನ್ನು ಯಾರು ಮುಟ್ಟಿದರು ಎಂದು ಕೇಳುತ್ತೀಯಲ್ಲಾ ಅಂದರು.
46ಆದರೆ ಯೇಸು--ಯಾರೋ ಒಬ್ಬರು ನನ್ನನ್ನು ಮುಟ್ಟಿದ್ದಾರೆ; ಯಾಕಂದರೆ ನನ್ನಿಂದ ಶಕ್ತಿಯು ಹೊರಟಿತೆಂದು ನನಗೆ ತಿಳಿಯಿತು ಅಂದನು.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ