ಯೆಹೆಜ್ಕೇಲನು 44:10

ಇಸ್ರಾಯೇಲ್ಯರು ತಪ್ಪಿಸಿಕೊಂಡು ನನ್ನಿಂದ ಅಗಲಿ, ತಮ್ಮ ವಿಗ್ರಹಗಳ ಕಡೆಗೆ ತಿರುಗಿ ಕೊಂಡ ವೇಳೆಯಲ್ಲಿ ನನಗೆ ದೂರವಾಗಿ ಹೋದ ಲೇವಿಯರು ಸಹ ತಮ್ಮ ಅಕ್ರಮಗಳನ್ನು ಹೊರುವರು.

ಸಂದರ್ಭದೊಂದಿಗೆ ಓದಿ · ಯೆಹೆಜ್ಕೇಲನು 44

8ನೀವು ನನ್ನ ಪರಿಶುದ್ಧವಾದ ಜವಾಬ್ದಾರಿಯನ್ನು ಕೈಗೊಳ್ಳದೆ ಬೇರೆಯವರನ್ನು ಕಾಯುವದಕ್ಕೆ ನಿಮ್ಮ ಪರಿ ಶುದ್ದ ಸ್ಥಳದಲ್ಲಿ ಇರಿಸಿದ್ದೀರಿ.

9ದೇವರಾದ ಕರ್ತನು ಹೀಗೆ ಹೇಳುತ್ತಾನೆ--ಹೃದಯದಲ್ಲಿಯೂ ಶರೀರದ ಲ್ಲಿಯೂ ಸುನ್ನತಿಯಿಲ್ಲದ ಯಾವೊಬ್ಬ ಪರಕೀಯನೂ ಇಸ್ರಾಯೇಲಿನ ಮಕ್ಕಳೊಳಗಿರುವ ಯಾವೊಬ್ಬ ಅಪರಿಚಿತನೂ ನನ್ನ ಪರಿಶುದ್ಧಸ್ಥಳದೊಳಗೆ ಪ್ರವೇಶಿಸ ಬಾರದು.

10ಇಸ್ರಾಯೇಲ್ಯರು ತಪ್ಪಿಸಿಕೊಂಡು ನನ್ನಿಂದ ಅಗಲಿ, ತಮ್ಮ ವಿಗ್ರಹಗಳ ಕಡೆಗೆ ತಿರುಗಿ ಕೊಂಡ ವೇಳೆಯಲ್ಲಿ ನನಗೆ ದೂರವಾಗಿ ಹೋದ ಲೇವಿಯರು ಸಹ ತಮ್ಮ ಅಕ್ರಮಗಳನ್ನು ಹೊರುವರು.

11ಆದರೂ ಅವರು ನನ್ನ ಪರಿಶುದ್ಧ ಸ್ಥಳದಲ್ಲಿ ಸೇವಿ ಸುವವರಾಗಿರುವರು; ಆಲಯದ ಬಾಗಿಲುಗಳ ಮೇಲ್ವಿ ಚಾರವನ್ನು ಹೊಂದಿ ಆಲಯಕ್ಕೆ ಸೇವೆಮಾಡುವರು; ಅವರು ಜನರಿಗೋಸ್ಕರ ದಹನಬಲಿಯನ್ನು ಬಲಿ ಯನ್ನೂ ಮಾಡಿ ಅವರಿಗೆ ಸೇವೆಮಾಡುವ ಹಾಗೆ ಅವರ ಮುಂದೆ ನಿಲ್ಲುವರು.

12ಅವರು ತಮ್ಮ ವಿಗ್ರ ಹಗಳ ಮುಂದೆ ಜನರಿಗಾಗಿ ಸೇವೆಮಾಡಿ ಇಸ್ರಾ ಯೇಲಿನ ಮನೆತನದವರಿಗೆ ಅಕ್ರಮದ ಆತಂಕವಾ ದದ್ದೇ ಕಾರಣ, ನಾನು ನನ್ನ ಕೈಯನ್ನು ಅವರಿಗೆ ವಿರುದ್ಧವಾಗಿ ಚಾಚಿದ್ದೇನೆ, ಅವರು ತಮ್ಮ ಅಕ್ರಮವನ್ನು ಹೊರುವರೆಂದು ದೇವರಾದ ಕರ್ತನು ಹೇಳುತ್ತಾನೆ.

ಯೆಹೆಜ್ಕೇಲನು 44 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी