ಲೂಕನು 9:28

ಈ ಮಾತುಗಳನ್ನು ಹೇಳಿ ಸುಮಾರು ಎಂಟು ದಿನಗಳಾದ ಮೇಲೆ ಆದದ್ದೇನಂದರೆ, ಆತನು ಪೇತ್ರ ಯೋಹಾನ ಮತ್ತು ಯಾಕೋಬರನ್ನು ಕರಕೊಂಡು ಪ್ರಾರ್ಥನೆ ಮಾಡುವದಕ್ಕಾಗಿ ಬೆಟ್ಟವನ್ನೇರಿದನು.

ಸಂದರ್ಭದೊಂದಿಗೆ ಓದಿ · ಲೂಕನು 9

26ಯಾವನಾದರೂ ನನ್ನ ಮತ್ತು ನನ್ನ ವಾಕ್ಯಗಳ ವಿಷಯದಲ್ಲಿ ನಾಚಿಕೊಳ್ಳುವದಾದರೆ ಮನುಷ್ಯಕುಮಾರನು ತನ್ನ ಮತ್ತು ತನ್ನ ತಂದೆಯ ಪ್ರಭಾವದೊಡನೆಯೂ ಪರಿಶುದ್ಧದೂತರೊಂದಿಗೂ ಬರುವಾಗ ಅವನ ವಿಷಯದಲ್ಲಿ ಆತನು ನಾಚಿಕೊಳ್ಳು ವನು.

27ಆದರೆ ನಾನು ನಿಮಗೆ ಸತ್ಯವಾಗಿ ಹೇಳು ತ್ತೇನೆ, ಇಲ್ಲಿ ನಿಂತುಕೊಂಡಿರುವ ಕೆಲವರು ದೇವರ ರಾಜ್ಯವನ್ನು ನೋಡುವ ತನಕ ಮರಣವನ್ನು ರುಚಿಸುವದೇ ಇಲ್ಲ ಅಂದನು.

28ಈ ಮಾತುಗಳನ್ನು ಹೇಳಿ ಸುಮಾರು ಎಂಟು ದಿನಗಳಾದ ಮೇಲೆ ಆದದ್ದೇನಂದರೆ, ಆತನು ಪೇತ್ರ ಯೋಹಾನ ಮತ್ತು ಯಾಕೋಬರನ್ನು ಕರಕೊಂಡು ಪ್ರಾರ್ಥನೆ ಮಾಡುವದಕ್ಕಾಗಿ ಬೆಟ್ಟವನ್ನೇರಿದನು.

29ಆತನು ಪ್ರಾರ್ಥನೆ ಮಾಡುತ್ತಿದ್ದಾಗ ಆತನ ಮುಖ ಭಾವವು ಬದಲಾಯಿತು; ಉಡುಪು ಬೆಳ್ಳಗಾಗಿ ಪ್ರಕಾಶಮಾನವಾಯಿತು.

30ಇಗೋ, ಮೋಶೆ ಮತ್ತು ಎಲೀಯ ಎಂಬ ಇಬ್ಬರು ಪುರುಷರು ಆತನೊಂದಿಗೆ ಮಾತನಾಡುತ್ತಿದ್ದರು.

ಲೂಕನು 9 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी