ಯೆಶಾಯ 57:4

ಯಾರ ವಿಷಯದಲ್ಲಿ ಕುಚೋದ್ಯ ಮಾಡುತ್ತೀರಿ? ಯಾರ ವಿಷಯವಾಗಿ ನೀವು ಬಾಯಿ ಅಗಲ ಮಾಡಿ ನಾಲಿಗೆಯನ್ನು ಚಾಚುತ್ತೀರಿ?

ಸಂದರ್ಭದೊಂದಿಗೆ ಓದಿ · ಯೆಶಾಯ 57

2ಅವನು ಸಮಾಧಾನಕ್ಕೆ ಪ್ರವೇಶಿಸುತ್ತಾನೆ. ಅವರಲ್ಲಿ ನೆಟ್ಟಗೆ ನಡೆಯುವ ಪ್ರತಿಯೊಬ್ಬನು ತನ್ನ ಹಾಸಿಗೆಯಲ್ಲಿ ವಿಶ್ರಮಿಸಿಕೊಳ್ಳುತ್ತಾನೆ.

3ಆದರೆ ನೀವು ಮಾಟಗಾರತಿಯ ಮಕ್ಕಳೇ, ಸೂಳೆಯ ಮತ್ತು ಜಾರನ ಸಂತಾನದವರೇ, ಇಲ್ಲಿಗೆ ಬನ್ನಿರಿ.

4ಯಾರ ವಿಷಯದಲ್ಲಿ ಕುಚೋದ್ಯ ಮಾಡುತ್ತೀರಿ? ಯಾರ ವಿಷಯವಾಗಿ ನೀವು ಬಾಯಿ ಅಗಲ ಮಾಡಿ ನಾಲಿಗೆಯನ್ನು ಚಾಚುತ್ತೀರಿ?

5ಹಸಿರಾದ ಏಲಾ ಮರಗಳ ಕೆಳಗೆ ವಿಗ್ರಹಗಳಿಂದ ಮದವೇರಿಸಿ ಕೊಂಡು ಹಳ್ಳಗಳಲ್ಲಿ ಬಂಡೆಗಳ ಬಿರುಕುಗಳಲ್ಲಿ ಮಕ್ಕಳನ್ನು ಕೊಂದುಹಾಕುವ ನೀವು ದ್ರೋಹದ ಮಕ್ಕಳೂ ಸುಳ್ಳಿನ ಸಂತತಿಯೂ ಅಲ್ಲವೋ?

6ಹಳ್ಳದ ನುಣುಪಾದ ಕಲ್ಲುಗಳು ನಿನ್ನ ಪಾಲು, ಅವುಗಳೇ ಹೌದು, ಅವೇ ನಿನ್ನ ಪಾಲು, ಅವುಗಳಿಗೆ ನೀನು ಪಾನದ್ರವ್ಯವನ್ನು ಮತ್ತು ಆಹಾರದರ್ಪಣೆಯನ್ನು ಅರ್ಪಿಸಿದ್ದೀ, ಇವುಗಳಿಂದ ನಾನು ಆದರಣೆ ಹೊಂದ ಬೇಕೋ?

ಯೆಶಾಯ 57 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी