ಯೋಹಾನನು 12:25

ತನ್ನ ಪ್ರಾಣ ವನ್ನು ಪ್ರೀತಿಸುವವನು ಅದನ್ನು ಕಳಕೊಳ್ಳುವನು; ಈ ಲೋಕದಲ್ಲಿ ತನ್ನ ಪ್ರಾಣವನ್ನು ಹಗೆಮಾಡುವವನು ನಿತ್ಯಜೀವಕ್ಕಾಗಿ ಅದನ್ನು ಕಾಪಾಡಿಕೊಳ್ಳುವನು.

ಸಂದರ್ಭದೊಂದಿಗೆ ಓದಿ · ಯೋಹಾನನು 12

23ಯೇಸು ಪ್ರತ್ಯುತ್ತರವಾಗಿ ಅವರಿಗೆ--ಮನುಷ್ಯಕುಮಾರನು ಮಹಿಮೆ ಹೊಂದುವ ಗಳಿಗೆ ಬಂದದೆ.

24ನಾನು ನಿಮಗೆ ನಿಜನಿಜವಾಗಿ ಹೇಳು ತ್ತೇನೆ--ಗೋದಿಯ ಕಾಳು ಭೂಮಿಯಲ್ಲಿ ಬಿದ್ದು ಸಾಯ ದಿದ್ದರೆ ಅದು ಒಂದೇ ಆಗಿ ಉಳಿಯುವದು; ಅದು ಸತ್ತಮೇಲೆ ಬಹಳ ಫಲಕೊಡುವದು.

25ತನ್ನ ಪ್ರಾಣ ವನ್ನು ಪ್ರೀತಿಸುವವನು ಅದನ್ನು ಕಳಕೊಳ್ಳುವನು; ಈ ಲೋಕದಲ್ಲಿ ತನ್ನ ಪ್ರಾಣವನ್ನು ಹಗೆಮಾಡುವವನು ನಿತ್ಯಜೀವಕ್ಕಾಗಿ ಅದನ್ನು ಕಾಪಾಡಿಕೊಳ್ಳುವನು.

26ಯಾವನಾದರೂ ನನ್ನನ್ನು ಸೇವಿಸುವವನಾದರೆ ಅವನು ನನ್ನನ್ನು ಹಿಂಬಾಲಿಸಲಿ; ನಾನು ಇರುವಲ್ಲಿಯೇ ನನ್ನ ಸೇವಕನೂ ಇರುವನು; ಯಾವನಾದರೂ ನನ್ನನ್ನು ಸೇವಿಸುವವನಾದರೆ ನನ್ನ ತಂದೆಯು ಅವನನ್ನು ಸನ್ಮಾನಿಸುವನು.

27ಈಗ ನನ್ನ ಪ್ರಾಣವು ತತ್ತರಿಸುತ್ತದೆ. ನಾನು ಏನು ಹೇಳಲಿ? ತಂದೆಯೇ, ಈ ಗಳಿಗೆಯಿಂದ ನನ್ನನ್ನು ತಪ್ಪಿಸು; ಆದರೆ ಇದಕ್ಕಾಗಿಯೇ ನಾನು ಈ ಗಳಿಗೆಗೆ ಬಂದೆನು.

ಯೋಹಾನನು 12 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी