ಧರ್ಮೋಪದೇಶಕಾಂಡ 29:19

ಈ ಶಾಪದ ಮಾತುಗಳನ್ನು ಕೇಳಿ ಅವನು--ನನ್ನ ಹೃದಯದ ಕಲ್ಪನೆ ಯಲ್ಲಿ ನಡೆದುಕೊಂಡು ದಾಹಕ್ಕೆ ಅಮಲನ್ನು ಕುಡಿಸಿ ದರೂ ನನಗೆ ಸಮಾಧಾನವಿರುವದೆಂದು ಹೇಳಿಕೊಂಡು ತನ್ನ ಹೃದಯದಲ್ಲಿ ತನ್ನನ್ನು ಆಶೀರ್ವದಿಸಿಕೊಳ್ಳುವವ ನಾದರೆ

ಸಂದರ್ಭದೊಂದಿಗೆ ಓದಿ · ಧರ್ಮೋಪದೇಶಕಾಂಡ 29

17ಅವರ ಬಳಿಯಲ್ಲಿರುವ ಮರ, ಕಲ್ಲು, ಬೆಳ್ಳಿ, ಬಂಗಾರಗಳ ಅಸಹ್ಯವಾದವು ಗಳನ್ನೂ ಬೊಂಬೆಗಳನ್ನೂ ನೀವು ನೋಡಿದಿರಲ್ಲಾ?

18ಈಹೊತ್ತು ನಮ್ಮ ದೇವರಾದ ಕರ್ತನನ್ನು ಬಿಟ್ಟು ಆ ಜನಾಂಗಗಳ ದೇವರುಗಳಿಗೆ ಸೇವೆಮಾಡುವದಕ್ಕೆ ತಿರುಗಿಕೊಳ್ಳುವ ಹೃದಯವುಳ್ಳ ಪುರುಷನಾದರೂ ಸ್ತ್ರೀಯಾದರೂ ಕುಟುಂಬವಾದರೂ ಗೋತ್ರವಾದರೂ ಇರಬಾರದು. ವಿಷವನ್ನೂ ಮಾಚಿಪತ್ರೆಯನ್ನೂ ಬೆಳೆ ಸುವ ಬೇರು ನಿಮ್ಮಲ್ಲಿ ಇರಬಾರದು.

19ಈ ಶಾಪದ ಮಾತುಗಳನ್ನು ಕೇಳಿ ಅವನು--ನನ್ನ ಹೃದಯದ ಕಲ್ಪನೆ ಯಲ್ಲಿ ನಡೆದುಕೊಂಡು ದಾಹಕ್ಕೆ ಅಮಲನ್ನು ಕುಡಿಸಿ ದರೂ ನನಗೆ ಸಮಾಧಾನವಿರುವದೆಂದು ಹೇಳಿಕೊಂಡು ತನ್ನ ಹೃದಯದಲ್ಲಿ ತನ್ನನ್ನು ಆಶೀರ್ವದಿಸಿಕೊಳ್ಳುವವ ನಾದರೆ

20ಅಂಥವನನ್ನು ಕರ್ತನು ಉಳಿಸುವದಿಲ್ಲ; ಆಗಲೇ ಕರ್ತನ ಕೋಪವೂ ರೋಷವೂ ಆ ಮನುಷ್ಯನ ಮೇಲೆ ಹೊಗೆ ಹಾಯುವವು. ಈ ಪುಸ್ತಕದಲ್ಲಿ ಬರೆದಿ ರುವ ಶಾಪವೆಲ್ಲಾ ಅವನ ಮೇಲೆ ನೆಲೆಯಾಗುವದು; ಕರ್ತನು ಅವನ ಹೆಸರನ್ನು ಆಕಾಶದ ಕೆಳಗಿನಿಂದ ಅಳಿಸಿಬಿಡುವನು.

21ಈ ನ್ಯಾಯಪ್ರಮಾಣದ ಪುಸ್ತಕ ದಲ್ಲಿ ಬರೆದಿರುವ ಒಡಂಬಡಿಕೆಯ ಎಲ್ಲಾ ಶಾಪಗಳ ಪ್ರಕಾರ ಕರ್ತನು ಅವನನ್ನು ಇಸ್ರಾಯೇಲಿನ ಎಲ್ಲಾ ಗೋತ್ರಗಳೊಳಗಿಂದ ಕೇಡಿಗೆ ಪ್ರತ್ಯೇಕಿಸುವನು.

ಧರ್ಮೋಪದೇಶಕಾಂಡ 29 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी