೧ ಥೆಸಲೊನೀಕದವರಿಗೆ 3:11

ನಾವು ನಿಮ್ಮ ಬಳಿಗೆ ಬರುವದಕ್ಕೆ ನಮ್ಮ ತಂದೆಯಾದ ದೇವರೂ ನಮ್ಮ ಕರ್ತನಾದ ಯೇಸು ಕ್ರಿಸ್ತನೂ ನಮಗೆ ಮಾರ್ಗವನ್ನು ಸರಾಗಮಾಡಲಿ.

ಸಂದರ್ಭದೊಂದಿಗೆ ಓದಿ · ೧ ಥೆಸಲೊನೀಕದವರಿಗೆ 3

9ನಿಮ್ಮ ನಿಮಿತ್ತ ನಮ್ಮ ದೇವರ ಮುಂದೆ ನಮಗಿರುವ ಎಲ್ಲಾ ಸಂತೋಷ ಕ್ಕಾಗಿ ತಿರಿಗಿ ದೇವರಿಗೆ ಎಂಥ ಕೃತಜ್ಞತಾಸ್ತುತಿಗಳನ್ನು ಸಲ್ಲಿಸುವದಕ್ಕಾದೀತು?

10ನಿಮ್ಮ ಮುಖವನ್ನು ನೋಡುವದಕ್ಕೂ ನಿಮ್ಮ ನಂಬಿಕೆಯಲ್ಲಿ ಕೊರತೆಯನ್ನು ಪೂರೈಸುವದಕ್ಕೂ ನಾವು ಹಗಲಿರುಳು ಅತ್ಯಧಿಕವಾಗಿ ಬೇಡುವವರಾಗಿದ್ದೇವೆ.

11ನಾವು ನಿಮ್ಮ ಬಳಿಗೆ ಬರುವದಕ್ಕೆ ನಮ್ಮ ತಂದೆಯಾದ ದೇವರೂ ನಮ್ಮ ಕರ್ತನಾದ ಯೇಸು ಕ್ರಿಸ್ತನೂ ನಮಗೆ ಮಾರ್ಗವನ್ನು ಸರಾಗಮಾಡಲಿ.

12ನಮ್ಮ ಪ್ರಿತಿಯು ನಿಮ್ಮ ಕಡೆಗೆ ಹೇಗೋ ಹಾಗೆಯೇ ನಿಮ್ಮ ಪ್ರೀತಿಯೂ ಒಬ್ಬರಿಂದೊಬ್ಬರಿಗೂ ಎಲ್ಲರ ಮೇಲೆಯೂ ಅಭಿವೃದ್ಧಿ ಹೊಂದಿ ಅತ್ಯಧಿಕವಾಗುವಂತೆ ಕರ್ತನು ನಿಮಗೆ ಅನುಗ್ರಹಿಸಲಿ.

13ನಮ್ಮ ಕರ್ತನಾದ ಯೇಸು ಕ್ರಿಸ್ತನು ತನ್ನ ಎಲ್ಲಾ ಪರಿಶುದ್ಧರೊಂದಿಗೆ ಬರುವಾಗ ನಿಮ್ಮ ಹೃದಯಗಳನ್ನು ದೃಢಪಡಿಸಿ ತಂದೆಯಾದ ದೇವರ ಸಮಕ್ಷಮದಲ್ಲಿ ನೀವು ಪರಿ ಶುದ್ಧರೂ ನಿರ್ದೋಷಿಗಳೂ ಆಗಿರುವಂತೆ ಮಾಡಲಿ.

೧ ಥೆಸಲೊನೀಕದವರಿಗೆ 3 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी