ಮತ್ತಾಯನು 3:10

ಈಗಾಗಲೇ ಮರಗಳ ಬೇರಿಗೆ ಕೊಡಲಿ ಹಾಕಿಯದೆ; ಆದದರಿಂದ ಒಳ್ಳೇ ಫಲವನ್ನು ಫಲಿಸದ ಪ್ರತಿಯೊಂದು ಮರವು ಕಡಿಯಲ್ಪಟ್ಟು ಬೆಂಕಿ ಯಲ್ಲಿ ಹಾಕಲ್ಪಡುವದು.

ಸಂದರ್ಭದೊಂದಿಗೆ ಓದಿ · ಮತ್ತಾಯನು 3

8ಹಾಗಾದರೆ ಮಾನಸಾಂತರಕ್ಕೆ ತಕ್ಕ ಫಲ ಗಳನ್ನು ಫಲಿಸಿರಿ;

9ಮತ್ತು -- ಅಬ್ರಹಾಮನು ನಮಗೆ ತಂದೆಯಾಗಿದ್ದಾನೆ ಎಂದು ನಿಮ್ಮ ನಿಮ್ಮೊಳಗೆ ಅಂದು ಕೊಳ್ಳಬೇಡಿರಿ; ಯಾಕಂದರೆ ದೇವರು ಅಬ್ರಹಾಮನಿಗೆ ಈ ಕಲ್ಲುಗಳಿಂದ ಮಕ್ಕಳನ್ನು ಎಬ್ಬಿಸ ಶಕ್ತನೆಂದು ನಾನು ನಿಮಗೆ ಹೇಳುತ್ತೇನೆ.

10ಈಗಾಗಲೇ ಮರಗಳ ಬೇರಿಗೆ ಕೊಡಲಿ ಹಾಕಿಯದೆ; ಆದದರಿಂದ ಒಳ್ಳೇ ಫಲವನ್ನು ಫಲಿಸದ ಪ್ರತಿಯೊಂದು ಮರವು ಕಡಿಯಲ್ಪಟ್ಟು ಬೆಂಕಿ ಯಲ್ಲಿ ಹಾಕಲ್ಪಡುವದು.

11ನಾನು ಮಾನ ಸಾಂತರದ ನಿಮಿತ್ತ ನಿಮಗೆ ನೀರಿನಲ್ಲಿ ಬಾಪ್ತಿಸ್ಮ ಮಾಡಿಸುವದು ನಿಜವೇ; ಆದರೆ ನನ್ನ ಹಿಂದೆ ಬರುವಾತನು ನನಗಿಂತಲೂ ಶಕ್ತನಾಗಿದ್ದಾನೆ. ಆತನ ಕೆರಗಳನ್ನು ಹೊರುವದಕ್ಕೂ ನಾನು ಯೋಗ್ಯನಲ್ಲ; ಆತನು ಪವಿತ್ರಾ ತ್ಮನಿಂದಲೂ ಬೆಂಕಿಯಿಂದಲೂ ನಿಮಗೆ ಬಾಪ್ತಿಸ್ಮ ಮಾಡಿ ಸುವನು.

12ಒನೆಯುವ ಮೊರವನ್ನು ಆತನು ತನ್ನ ಕೈಯಲ್ಲಿ ಹಿಡಿದಿದ್ದಾನೆ; ಆತನು ತನ್ನ ಕಣವನ್ನು ಸಂಪೂರ್ಣವಾಗಿ ಹಸನುಮಾಡಿ ತನ್ನ ಗೋಧಿಯನ್ನು ಕಣಜದಲ್ಲಿ ಕೂಡಿಸುವನು; ಆದರೆ ಹೊಟ್ಟನ್ನು ಆರದ ಬೆಂಕಿಯಿಂದ ಸುಟ್ಟುಬಿಡುವನು ಎಂದು ಹೇಳಿದನು.

ಮತ್ತಾಯನು 3 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी