ಯಾಕೋಬನು 4:5

ಇದಲ್ಲದೆ--ನಮ್ಮಲ್ಲಿ ವಾಸವಾಗಿರುವ ಆತ್ಮನು ಅಭಿಮಾನತಾಪದಿಂದ ಹಂಬಲಿಸುತ್ತಾನೆಂಬ ಬರಹವು ವ್ಯರ್ಥವಾಗಿ ಹೇಳುತ್ತದೆ ಎಂದು ನೀವು ಭಾವಿಸು ತ್ತೀರೋ?

ಸಂದರ್ಭದೊಂದಿಗೆ ಓದಿ · ಯಾಕೋಬನು 4

3ನೀವು ಬೇಡಿದರೂ ಬೇಡಿದ್ದನ್ನು ನಿಮ್ಮ ಭೋಗಗಳಿಗಾಗಿ ಉಪಯೋಗಿಸ ಬೇಕೆಂದು ತಪ್ಪಾಗಿ ಬೇಡಿಕೊಳ್ಳುವದರಿಂದ ನಿಮಗೆ ದೊರೆಯುವದಿಲ್ಲ.

4ವ್ಯಭಿಚಾರಿಗಳೇ, ವ್ಯಭಿಚಾರಿಣಿ ಯರೇ, ಇಹಲೋಕ ಸ್ನೇಹವು ದೇವವೈರವೆಂದು ನಿಮಗೆ ತಿಳಿಯದೋ? ಲೋಕಕ್ಕೆ ಸ್ನೇಹಿತನಾಗಿರ ಬೇಕೆಂದಿರುವವನು ದೇವರಿಗೆ ವೈರಿಯಾಗಿದ್ದಾನೆ.

5ಇದಲ್ಲದೆ--ನಮ್ಮಲ್ಲಿ ವಾಸವಾಗಿರುವ ಆತ್ಮನು ಅಭಿಮಾನತಾಪದಿಂದ ಹಂಬಲಿಸುತ್ತಾನೆಂಬ ಬರಹವು ವ್ಯರ್ಥವಾಗಿ ಹೇಳುತ್ತದೆ ಎಂದು ನೀವು ಭಾವಿಸು ತ್ತೀರೋ?

6ಆತನು ಹೆಚ್ಚಾದ ಕೃಪೆಯನ್ನು ಕೊಡುತ್ತಾನೆ. ಆದದರಿಂದ--ದೇವರು ಅಹಂಕಾರಿಗಳನ್ನು ಎದುರಿಸು ತ್ತಾನೆ, ದೀನರಿಗಾದರೋ ಕೃಪೆಯನ್ನು ಅನುಗ್ರಹಿಸು ತ್ತಾನೆ ಎಂದು ಆತನು ಹೇಳುತ್ತಾನೆ.

7ಹೀಗಿರಲಾಗಿ ದೇವರಿಗೆ ಒಳಗಾಗಿರಿ. ಸೈತಾನನನ್ನು ಎದುರಿಸಿರಿ, ಆಗ ಅವನು ನಿಮ್ಮನ್ನು ಬಿಟ್ಟು ಓಡಿಹೋಗುವನು.

ಯಾಕೋಬನು 4 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी