ನನ್ನ ಹೊರತಾಗಿ ಬೆಳ್ಳಿ ಬಂಗಾರದ ದೇವರುಗಳನ್ನೂ ನೀವು ಮಾಡಿಕೊಳ್ಳಬಾರದು.
21ಆಗ ಜನರು ದೂರದಲ್ಲಿ ನಿಂತರು. ಮೋಶೆಯು ದೇವರಿದ್ದ ಕಾರ್ಗತ್ತಲೆಯ ಹತ್ತಿರ ಬಂದನು.
22ಕರ್ತನು ಮೋಶೆಗೆ--ನೀನು ಇಸ್ರಾಯೇಲ್ ಮಕ್ಕಳಿಗೆ ಹೀಗೆ ಹೇಳಬೇಕು--ನಾನು ಆಕಾಶದಿಂದ ನಿಮ್ಮ ಸಂಗಡ ಮಾತನಾಡಿದ್ದನ್ನು ನೀವು ನೋಡಿದ್ದೀರಿ.
23ನನ್ನ ಹೊರತಾಗಿ ಬೆಳ್ಳಿ ಬಂಗಾರದ ದೇವರುಗಳನ್ನೂ ನೀವು ಮಾಡಿಕೊಳ್ಳಬಾರದು.
24ನನ್ನ ಯಜ್ಞವೇದಿಯನ್ನು ಮಣ್ಣಿನಿಂದ ಮಾಡ ಬೇಕು. ಅದರ ಮೇಲೆ ನಿನ್ನ ದಹನಬಲಿಗಳನ್ನೂ ಸಮಾಧಾನದ ಬಲಿಗಳನ್ನೂ ಕುರಿಗಳನ್ನೂ ಎತ್ತುಗಳನ್ನೂ ಅರ್ಪಿಸಬೇಕು; ನನ್ನ ಹೆಸರನ್ನು ಜ್ಞಾಪಕಮಾಡುವ ಎಲ್ಲಾ ಸ್ಥಳಗಳಲ್ಲಿ ನಾನು ನಿಮ್ಮ ಬಳಿಗೆ ಬಂದು ನಿಮ್ಮನ್ನು ಆಶೀರ್ವದಿಸುವೆನು.
25ನೀನು ನನಗೆ ಯಜ್ಞವೇದಿ ಯನ್ನು ಕಲ್ಲಿನಿಂದ ಮಾಡಿದರೆ ಅದನ್ನು ಕೆತ್ತಿದ ಕಲ್ಲಿನಿಂದ ಕಟ್ಟಬಾರದು. ಉಳಿಯನ್ನು ಅದರ ಮೇಲೆ ಎತ್ತಿದರೆ ನೀನು ಅದನ್ನು ಅಪವಿತ್ರ ಮಾಡಿದವನಾಗಿದ್ದೀ.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ