ನಾನು ಅವರಿಗೆ ಸಿಳ್ಳುಹಾಕಿ ಅವರನ್ನು ಕೂಡಿಸುವೆನು; ಅವರನ್ನು ವಿಮೋಚಿ ಸಿದ್ದೇನೆ; ಅವರು ಹಿಂದೆ ಹೆಚ್ಚಿದ ಹಾಗೆ ಹೆಚ್ಚುವರು.
6ಇದಲ್ಲದೆ ನಾನು ಯೆಹೂದನ ಮನೆತನದವರನ್ನು ಬಲಪಡಿಸುವೆನು, ಯೋಸೇಫನ ಮನೆತನದವರನ್ನು ರಕ್ಷಿಸುವೆನು; ಅವರನ್ನು ಕನಿಕರಿಸುವದರಿಂದ ತಿರಿಗಿ ತಂದು ನಿವಾಸಿಸ ಮಾಡುವೆನು; ನಾನು ಅವರನ್ನು ತಳ್ಳಿಬಿಡಲಿಲ್ಲವೋ ಎಂಬಂತೆ ಅವರು ಇರುವರು; ನಾನೇ ಅವರ ದೇವರಾದ ಕರ್ತನಾಗಿದ್ದು ಅವರಿಗೆ ಉತ್ತರಕೊಡುವೆನು.
7ಎಫ್ರಾಯಾಮಿನವರು ಶೂರನಂತೆ ಇರುವರು; ಅವರ ಹೃದಯವು ದ್ರಾಕ್ಷಾರಸದಿಂದಾದ ಹಾಗೆ ಸಂತೋಷಪಡುವದು; ಹೌದು, ಅವರ ಮಕ್ಕಳು ನೋಡಿ ಸಂತೋಷಿಸುವರು; ಅವರ ಹೃದಯವು ಕರ್ತ ನಲ್ಲಿ ಉಲ್ಲಾಸಪಡುವದು.
8ನಾನು ಅವರಿಗೆ ಸಿಳ್ಳುಹಾಕಿ ಅವರನ್ನು ಕೂಡಿಸುವೆನು; ಅವರನ್ನು ವಿಮೋಚಿ ಸಿದ್ದೇನೆ; ಅವರು ಹಿಂದೆ ಹೆಚ್ಚಿದ ಹಾಗೆ ಹೆಚ್ಚುವರು.
9ನಾನು ಅವರನ್ನು ಜನಗಳಲ್ಲಿ ಬಿತ್ತುವೆನು; ದೂರ ದೇಶಗಳಲ್ಲಿ ಅವರು ನನ್ನನ್ನು ಜ್ಞಾಪಕಮಾಡುವರು; ತಮ್ಮ ಮಕ್ಕಳ ಸಂಗಡ ಬದುಕಿ ಮತ್ತೆ ತಿರುಗಿಕೊಳ್ಳುವರು.
10ಐಗುಪ್ತದೇಶದೊಳಗಿಂದ ಸಹ ಅವರನ್ನು ತಿರಿಗಿ ತರುವೆನು; ಅಶ್ಯೂರಿನೊಳಗಿಂದ ಅವರನ್ನು ಕೂಡಿಸು ವೆನು; ಗಿಲ್ಯಾದಿನ ಮತ್ತು ಲೆಬನೋನಿನ ದೇಶಕ್ಕೆ ಅವರನ್ನು ತರುವೆನು; ಅವರಿಗೆ ಸ್ಥಳ ಸಾಲದೆ ಇರು ವದು.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ