ಮಾರ್ಕನು 8:3

ನಾನು ಅವರನ್ನು ಉಪವಾಸ ವಾಗಿ ಅವರ ಮನೆಗಳಿಗೆ ಕಳುಹಿಸಿದರೆ ದಾರಿಯಲ್ಲಿ ಬಳಲಿ ಹೋಗುವರು; ಯಾಕಂದರೆ ಅವರಲ್ಲಿ ಕೆಲ ವರು ದೂರದಿಂದ ಬಂದಿದ್ದಾರೆ ಅಂದನು.

ಸಂದರ್ಭದೊಂದಿಗೆ ಓದಿ · ಮಾರ್ಕನು 8

1ಆ ದಿವಸಗಳಲ್ಲಿ (ಯೇಸುವನ್ನು ಹಿಂಬಾಲಿಸುತ್ತಿದ್ದ) ದೊಡ್ಡ ಜನಸಮೂಹಕ್ಕೆ ಊಟಕ್ಕೇನೂ ಇರಲಿಲ್ಲ. ಆಗ ಯೇಸು ತನ್ನ ಶಿಷ್ಯರನ್ನು ಹತ್ತಿರಕ್ಕೆ ಕರೆದು ಅವರಿಗೆ--

2ಜನ ಸಮೂಹವನ್ನು ನಾನು ಕನಿಕರಿಸುತ್ತೇನೆ; ಯಾಕಂದರೆ ಮೂರು ದಿನ ಗಳಿಂದ ಇವರು ನನ್ನೊಂದಿಗಿದ್ದಾರೆ ಮತ್ತು ಅವರಿಗೆ ಊಟಕ್ಕೇನೂ ಇಲ್ಲ.

3ನಾನು ಅವರನ್ನು ಉಪವಾಸ ವಾಗಿ ಅವರ ಮನೆಗಳಿಗೆ ಕಳುಹಿಸಿದರೆ ದಾರಿಯಲ್ಲಿ ಬಳಲಿ ಹೋಗುವರು; ಯಾಕಂದರೆ ಅವರಲ್ಲಿ ಕೆಲ ವರು ದೂರದಿಂದ ಬಂದಿದ್ದಾರೆ ಅಂದನು.

4ಅದಕ್ಕೆ ಆತನ ಶಿಷ್ಯರು ಪ್ರತ್ಯುತ್ತರವಾಗಿ ಆತನಿಗೆ-- ಒಬ್ಬನು ಈ ಅಡವಿಯಲ್ಲಿ ರೊಟ್ಟಿಯಿಂದ ಈ ಜನರನ್ನು ಎಲ್ಲಿಂದ ತೃಪ್ತಿಪಡಿಸಾನು ಅಂದರು.

5ಆತನು ಅವರಿಗೆ--ನಿಮ್ಮಲ್ಲಿ ಎಷ್ಟು ರೊಟ್ಟಿಗಳಿವೆ ಎಂದು ಕೇಳಿದ್ದಕ್ಕೆ ಅವರು --ಏಳು ರೊಟ್ಟಿಗಳು ಇವೆ ಅಂದರು.

ಮಾರ್ಕನು 8 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी