೨ ಪೂರ್ವಕಾಲವೃತ್ತಾಂತ 34:11

ಕೆತ್ತಿದ ಕಲ್ಲುಗಳನ್ನೂ ಜಂತೆಗಳಿಗೋಸ್ಕರ ಮರಗ ಳನ್ನೂ ಕೊಂಡುಕೊಂಡವರಾಗಿ ಯೆಹೂದದ ಅರಸು ಗಳು ಕೆಡವಿಹಾಕಿದ ಮನೆಗಳಲ್ಲಿ ನೆಲಕ್ಕೆ ಹಾಸುವದ ಕ್ಕೋಸ್ಕರ ಶಿಲ್ಪಿಯವರಿಗೂ ಕಟ್ಟುವವರಿಗೂ ಕೊಟ್ಟರು.

ಸಂದರ್ಭದೊಂದಿಗೆ ಓದಿ · ೨ ಪೂರ್ವಕಾಲವೃತ್ತಾಂತ 34

9ಅವರು ಪ್ರಧಾನ ಯಾಜಕನಾದ ಹಿಲ್ಕೀಯನ ಬಳಿಗೆ ಬಂದು ದ್ವಾರಪಾಲಕರಾದ ಲೇವಿಯರು ಮನಸ್ಸೆ ಎಫ್ರಾ ಯಾಮಿನವರ ಕೈಯಿಂದಲೂ ಇಸ್ರಾಯೇಲಿನ ಉಳಿದ ವರ ಕೈಯಿಂದಲೂ ಯೆಹೂದ ಬೆನ್ಯಾವಿಾನಿನವರೆ ಲ್ಲರ ಕೈಯಿಂದಲೂ ಕೂಡಿಸಿ ಅದನ್ನು ಯೆರೂಸಲೇ ಮಿಗೆ ತಿರಿಗಿ ಬಂದು ದೇವರ ಆಲಯಕ್ಕೆ ಹಣವನ್ನು ಕೊಟ್ಟರು.

10ಕರ್ತನ ಆಲಯದ ಕೆಲಸದವರ ವಿಚಾರ ಕರ ಕೈಯಲ್ಲಿ ಅದನ್ನು ಒಪ್ಪಿಸಿದರು. ಇವರು ಆಲಯ ವನ್ನು ಭದ್ರಪಡಿಸಿ ದುರಸ್ತುಮಾಡಲು ಕರ್ತನ ಆಲ ಯದಲ್ಲಿ ಕೆಲಸ ಮಾಡುವವರಿಗೆ ಅದನ್ನು ಕೊಟ್ಟರು.

11ಕೆತ್ತಿದ ಕಲ್ಲುಗಳನ್ನೂ ಜಂತೆಗಳಿಗೋಸ್ಕರ ಮರಗ ಳನ್ನೂ ಕೊಂಡುಕೊಂಡವರಾಗಿ ಯೆಹೂದದ ಅರಸು ಗಳು ಕೆಡವಿಹಾಕಿದ ಮನೆಗಳಲ್ಲಿ ನೆಲಕ್ಕೆ ಹಾಸುವದ ಕ್ಕೋಸ್ಕರ ಶಿಲ್ಪಿಯವರಿಗೂ ಕಟ್ಟುವವರಿಗೂ ಕೊಟ್ಟರು.

12ಈ ಮನುಷ್ಯರು ಕೆಲಸವನ್ನು ನಂಬಿಕೆಯಿಂದ ಮಾಡಿ ದರು. ಅವರ ವಿಚಾರಣೆಯ ಕರ್ತರು ಯಾರಂದರೆ: ಮೆರಾರಿಯ ಕುಮಾರರಲ್ಲಿ ಲೇವಿಯರಾದ ಯಹತನೂ ಒಬದ್ಯನೂ; ಕೆಹಾತ್ಯರ ಮಕ್ಕಳಲ್ಲಿ ಜೆಕರೀಯನೂ ಮೆಷುಲ್ಲಾಮನೂ; ಗೀತವಾದ್ಯಗಳಲ್ಲಿ ಬುದ್ಧಿಯುಳ್ಳವ ರಾದ ಲೇವಿಯರೆಲ್ಲರೂ ಅದನ್ನು ನಡಿಸುತ್ತಾ ಇದ್ದರು.

13ಇದಲ್ಲದೆ ಹೊರೆಗಾರರ ಮೇಲೆಯೂ ಬೇರೆ ಬೇರೆ ಸೇವೆಯ ಕೆಲಸವನ್ನು ಮಾಡುವವರ ಮೇಲೆಯೂ ಅವರು ವಿಚಾರಕರಾಗಿದ್ದರು. ಲೇವಿಯವರಲ್ಲಿ ಕೆಲವರು ರಾಯಸದವರೂ ಯಜಮಾನರೂ ದ್ವಾರಪಾಲಕರೂ ಆಗಿದ್ದರು.

೨ ಪೂರ್ವಕಾಲವೃತ್ತಾಂತ 34 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी