೨ ಸಮುವೇಲನು 3:29

ಅದು ಯೋವಾಬನ ತಲೆಯ ಮೇಲೆಯೂ ಅವನ ತಂದೆಯ ಮನೆತನದವರ ಮೇಲೆಯೂ ಇರಲಿ. ಯೋವಾಬನ ಮನೆಯಲ್ಲಿ ರಕ್ತ ಸ್ರಾವ ರೋಗದವನೂ ಕುಷ್ಠರೋಗಿಯೂ ಕೋಲು ಹಿಡಿದು ನಡೆಯುವವನೂ ಕತ್ತಿಯಿಂದ ಬೀಳುವವನೂ ರೊಟ್ಟಿಯ ಕೊರತೆಯುಳ್ಳ ಯಾವನೂ ತಪ್ಪಿಸಿಕೊಳ್ಳ ಲಾರದೆ ಇರಲಿ ಅಂದನು.

ಸಂದರ್ಭದೊಂದಿಗೆ ಓದಿ · ೨ ಸಮುವೇಲನು 3

27ಅಬ್ನೇರನು ಹೆಬ್ರೋನಿಗೆ ತಿರಿಗಿ ಬಂದ ತರುವಾಯ ಯೋವಾಬನು ಬಾಗಲಲ್ಲಿ ಅವನ ಸಂಗಡ ಸಮಾಧಾನವಾಗಿ ಮಾತ ನಾಡಿ ಅವನನ್ನು ಒಂದು ಕಡೆ ಕರಕೊಂಡು ಹೋಗಿ ತನ್ನ ತಮ್ಮನಾದ ಅಸಾಹೇಲನ ರಕ್ತಾಪರಾಧದ ನಿಮಿತ್ತ ಅಲ್ಲಿ ಅವನ ಪಕ್ಕೆಯ ಐದನೇ ಎಲುಬಿನಲ್ಲಿ ಇರಿದು ಕೊಂದುಹಾಕಿದನು.

28ದಾವೀದನು ಅದನ್ನು ಕೇಳಿದಾಗ--ನೇರನ ಮಗ ನಾದ ಅಬ್ನೇರನ ರಕ್ತಾಪರಾಧಕ್ಕೆ ನಾನೂ ನನ್ನ ರಾಜ್ಯವೂ ಎಂದೆಂದಿಗೂ ಕರ್ತನ ಮುಂದೆ ನಿರಪರಾ ಧಿಯಾಗಿದ್ದೇವೆ.

29ಅದು ಯೋವಾಬನ ತಲೆಯ ಮೇಲೆಯೂ ಅವನ ತಂದೆಯ ಮನೆತನದವರ ಮೇಲೆಯೂ ಇರಲಿ. ಯೋವಾಬನ ಮನೆಯಲ್ಲಿ ರಕ್ತ ಸ್ರಾವ ರೋಗದವನೂ ಕುಷ್ಠರೋಗಿಯೂ ಕೋಲು ಹಿಡಿದು ನಡೆಯುವವನೂ ಕತ್ತಿಯಿಂದ ಬೀಳುವವನೂ ರೊಟ್ಟಿಯ ಕೊರತೆಯುಳ್ಳ ಯಾವನೂ ತಪ್ಪಿಸಿಕೊಳ್ಳ ಲಾರದೆ ಇರಲಿ ಅಂದನು.

30ಹೀಗೆಯೇ ಅಬ್ನೇರ ನನ್ನು ಕೊಂದುಹಾಕಿದರು; ಅವನು ಅವರ ಸಹೋ ದರನಾದ ಅಸಾಹೇಲನನ್ನು ಗಿಬ್ಯೋನಿನ ಯುದ್ಧದಲ್ಲಿ ಕೊಂದುಹಾಕಿದ್ದನು.

31ಆಗ ದಾವೀದನು ಯೋವಾಬನಿಗೂ ಅವನ ಸಂಗಡವಿದ್ದ ಎಲ್ಲಾ ಜನರಿಗೂ--ನೀವು ನಿಮ್ಮ ವಸ್ತ್ರಗ ಳನ್ನು ಹರಕೊಂಡು ಗೋಣೀತಟ್ಟುಗಳನ್ನು ಉಟ್ಟು ಕೊಂಡು ಅಬ್ನೇರನ ಮುಂದೆ ಗೋಳಾಡಿರಿ ಅಂದನು.ಅರಸನಾದ ದಾವೀದನು ತಾನೇ ಅವನ ಶವದ ಪೆಟ್ಟಿಗೆಯ ಹಿಂದೆ ಹೋದನು.

೨ ಸಮುವೇಲನು 3 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी