ಯೋಹಾನನು 8:8

ತಿರಿಗಿ ಆತನು ಬೊಗ್ಗಿಕೊಂಡು ನೆಲದ ಮೇಲೆ ಬರೆದನು.

ಸಂದರ್ಭದೊಂದಿಗೆ ಓದಿ · ಯೋಹಾನನು 8

6ಅವರು ಆತನನ್ನು ಶೋಧಿಸುವವರಾಗಿ ಆತನ ಮೇಲೆ ತಪ್ಪು ಹೊರಿಸಬೇಕೆಂದು ಹೀಗೆ ಹೇಳಿ ದರು. ಆದರೆ ಯೇಸು ಅವರ ಮಾತುಗಳನ್ನು ಕೇಳದವ ನಂತೆ ಬೊಗ್ಗಿಕೊಂಡು ತನ್ನ ಬೆರಳಿನಿಂದ ನೆಲದ ಮೇಲೆ ಬರೆದನು.

7ಆದರೆ ಅವರು ಬಿಡದೆ ಆತನನ್ನು ಕೇಳುತ್ತಿರಲು ಆತನು ಮೇಲಕ್ಕೆ ನೋಡಿ--ನಿಮ್ಮೊಳಗೆ ಯಾವನು ಪಾಪವಿಲ್ಲದವನಾಗಿದ್ದಾನೋ ಅವನೇ ಮೊದಲು ಆಕೆಯ ಮೇಲೆ ಕಲ್ಲನ್ನು ಹಾಕಲಿ ಎಂದು ಅವರಿಗೆ ಹೇಳಿದನು.

8ತಿರಿಗಿ ಆತನು ಬೊಗ್ಗಿಕೊಂಡು ನೆಲದ ಮೇಲೆ ಬರೆದನು.

9ಅದನ್ನು ಕೇಳಿದವರು ತಮ್ಮ ಸ್ವಂತ ಮನಸ್ಸಾಕ್ಷಿಯಿಂದ ಮನವರಿಕೆಯಾಗಿ ಹಿರಿಯವನು ಮೊದಲುಗೊಂಡು ಕಡೆಯವನವರೆಗೂ ಒಬ್ಬೊಬ್ಬರಾಗಿ ಹೊರಗೆಹೋದರು; ಆಗ ಯೇಸು ಒಬ್ಬನೇ ಉಳಿದನು; ಆ ಹೆಂಗಸು ನಡುವೆ ನಿಂತು ಕೊಂಡಿದ್ದಳು.

10ಯೇಸು ಮೇಲಕ್ಕೆ ನೋಡಿ ಆ ಹೆಂಗಸಿನ ಹೊರತು ಯಾರನ್ನೂ ಕಾಣದೆ ಆಕೆಗೆ--ಸ್ತ್ರೀಯೇ, ನಿನ್ನ ಮೇಲೆ ದೂರು ಹೊರಿಸಿದವರು ಎಲ್ಲಿ ದ್ದಾರೆ? ನಿನಗೆ ಯಾರೂ ಶಿಕ್ಷೆ ವಿಧಿಸಲಿಲ್ಲವೋ? ಅಂದನು.

ಯೋಹಾನನು 8 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी