ಜೆಕರ್ಯ 1:3

ಆದದರಿಂದ ನೀನು ಅವರಿಗೆ ಹೇಳತಕ್ಕದ್ದೇ ನಂದರೆ--ಸೈನ್ಯಗಳ ಕರ್ತನು ಹೀಗೆ ಹೇಳುತ್ತಾನೆ--ನನ್ನ ಕಡೆಗೆ ತಿರುಗಿ ಕೊಳ್ಳಿರಿ, ಆಗ ನಾನು ನಿಮ್ಮ ಬಳಿಗೆ ತಿರುಗಿಕೊಳ್ಳುವೆನೆಂದು ಸೈನ್ಯಗಳ ಕರ್ತನು ಹೇಳುತ್ತಾನೆ.

ಸಂದರ್ಭದೊಂದಿಗೆ ಓದಿ · ಜೆಕರ್ಯ 1

1ದಾರ್ಯಾವೆಷನ ಎರಡನೆಯ ವರುಷದ ಎಂಟನೆಯ ತಿಂಗಳಲ್ಲಿ ಕರ್ತನ ವಾಕ್ಯವು ಇದ್ದೋನನ ಮಗನಾದ ಬೆರಕ್ಯನ ಮಗನಾದ ಜೆಕರ್ಯ ನೆಂಬ ಪ್ರವಾದಿಗೆ ಉಂಟಾಯಿತು. ಹೇಗಂದರೆ--

2ಕರ್ತನು ನಿಮ್ಮ ಪಿತೃಗಳ ಮೇಲೆ ಬಹು ಕೋಪಗೊಂಡಿ ದ್ದಾನೆ.

3ಆದದರಿಂದ ನೀನು ಅವರಿಗೆ ಹೇಳತಕ್ಕದ್ದೇ ನಂದರೆ--ಸೈನ್ಯಗಳ ಕರ್ತನು ಹೀಗೆ ಹೇಳುತ್ತಾನೆ--ನನ್ನ ಕಡೆಗೆ ತಿರುಗಿ ಕೊಳ್ಳಿರಿ, ಆಗ ನಾನು ನಿಮ್ಮ ಬಳಿಗೆ ತಿರುಗಿಕೊಳ್ಳುವೆನೆಂದು ಸೈನ್ಯಗಳ ಕರ್ತನು ಹೇಳುತ್ತಾನೆ.

4ನೀವು ನಿಮ್ಮ ಪಿತೃಗಳ ಹಾಗಿರಬೇಡಿರಿ; ಅವರಿಗೆ ಪೂರ್ವದ ಪ್ರವಾದಿಗಳು ಕೂಗಿ--ನಿಮ್ಮ ಕೆಟ್ಟ ಮಾರ್ಗಗಳನ್ನೂ ನಿಮ್ಮ ಕೆಟ್ಟ ಕ್ರಿಯೆಗಳನ್ನೂ ಬಿಟ್ಟು ತಿರುಗಿರಿ ಎಂದು ಸೈನ್ಯಗಳ ಕರ್ತನು ಅನ್ನುತ್ತಾನೆಂದು ಹೇಳಿದರು; ಆದರೆ ಅವರು ಕೇಳಲಿಲ್ಲ; ನನ್ನಲ್ಲಿ ಲಕ್ಷ್ಯ ವಿಡಲಿಲ್ಲವೆಂದು ಕರ್ತನು ಅನ್ನುತ್ತಾನೆ.

5ನಿಮ್ಮ ಪಿತೃ ಗಳೋ, ಅವರು ಎಲ್ಲಿ? ಪ್ರವಾದಿಗಳು, ಅವರು ನಿತ್ಯವಾಗಿ ಬದುಕುತ್ತಾರೋ?

ಜೆಕರ್ಯ 1 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी