ಇದೇ ಕನಸು! ಮತ್ತು ಇದರ ಅರ್ಥವನ್ನು ನಾವು ಅರಸನ ಮುಂದೆ ಹೇಳು ತ್ತೇವೆ.
34ನೀನು ನೋಡುತ್ತಿರಲಾಗಿ, ಒಂದು ಕಲ್ಲು ಕೈಗಳ ಸಹಾಯವಿಲ್ಲದೆ ಒಡೆಯಲ್ಪಟ್ಟು ಅರ್ಧ ಕಬ್ಬಿ ಣವೂ ಅರ್ಧ ಮಣ್ಣೂ ಆಗಿದ್ದ ಆ ವಿಗ್ರಹದ ಪಾದ ಗಳನ್ನು ಬಡಿದು ಅವುಗಳನ್ನು ಚೂರುಚೂರು ಮಾಡಿತು.
35ಆಮೇಲೆ ಕಬ್ಬಿಣವೂ ಮಣ್ಣೂ ಹಿತ್ತಾಳೆಯೂ ಬೆಳ್ಳಿಯೂ ಮತ್ತು ಬಂಗಾರವೂ ಕೂಡ ಒಡೆದು ಚೂರು ಚೂರಾಗಿ ಬೇಸಿಗೆ ಕಾಲದ ಧಾನ್ಯದ ಹೊಟ್ಟಿನ ಹಾಗಾ ದವು; ಅವುಗಳಿಗೆ ಎಡೆ ಸಿಗದ ಹಾಗೆ ಗಾಳಿಯು ಅವುಗಳನ್ನು ಹೊಡೆದುಕೊಂಡು ಹೋಯಿತು; ಪ್ರತಿಮೆಯನ್ನು ಬಡಿದ ಕಲ್ಲು ದೊಡ್ಡ ಬೆಟ್ಟವಾಗಿ ಸಮಸ್ತ ಭೂಮಿಯನ್ನು ತುಂಬಿಸಿತು.
36ಇದೇ ಕನಸು! ಮತ್ತು ಇದರ ಅರ್ಥವನ್ನು ನಾವು ಅರಸನ ಮುಂದೆ ಹೇಳು ತ್ತೇವೆ.
37ಓ ಅರಸನೇ, ನೀನು ಅರಸರಿಗೆ ಅರಸನಾಗಿ ರುವೆ; ಪರಲೋಕದ ದೇವರು ನಿನಗೆ ರಾಜ್ಯವನ್ನೂ ಬಲವನ್ನೂ ಅಧಿಕಾರವನ್ನೂ ಘನವನ್ನೂ ಕೊಟ್ಟಿದ್ದಾನೆ.
38ಮನುಷ್ಯರ ಮಕ್ಕಳು, ಭೂಮಿಯ ಮೃಗಗಳೂ ಆಕಾಶದ ಪಕ್ಷಿಗಳೂ ವಾಸಿಸುವಂತಾದ್ದೆಲ್ಲವನ್ನೂ ನಿನ್ನ ಕೈಯಲ್ಲಿ ಕೊಟ್ಟು ಅವೆಲ್ಲವುಗಳನ್ನು ಆಳುವಂತೆ ನಿನ್ನನ್ನು ಮಾಡಿದ್ದಾನೆ. ಆ ಬಂಗಾರದ ತಲೆಯು ನೀನೇ.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ