ಯೆರೆಮಿಯ 30:7

ಅಯ್ಯೋ, ಆ ದಿನವು ಭಯಂಕರವಾದದ್ದು; ಅದರಂಥದ್ದು ಯಾವದೂ ಇಲ್ಲ; ಅದು ಯಾಕೋಬನಿಗೆ ಇಕ್ಕಟ್ಟಿನ ಕಾಲವೇ; ಆದಾಗ್ಯೂ ಅವನು ಅದರಿಂದ ರಕ್ಷಿಸಲ್ಪಡುವನು.

ಸಂದರ್ಭದೊಂದಿಗೆ ಓದಿ · ಯೆರೆಮಿಯ 30

5ಕರ್ತನು ಹೀಗೆ ಹೇಳುತ್ತಾನೆ--ನಾವು ನಡುಗುವಿಕೆಯ ಮತ್ತು ಭಯದ ಸ್ವರವನ್ನು ಕೇಳಿದ್ದೇವೆಯೇ ಹೊರತು ಸಮಾಧಾನದ್ದಲ್ಲ.

6ಈಗ ವಿಚಾರಿಸಿ ನೋಡಿರಿ; ಗಂಡಸು ಪ್ರಸವವೇದನೆ ಪಡುವದುಂಟೇ? ನಾನು ಯಾಕೆ ಪುರುಷರೆಲ್ಲರನು ಪ್ರಸವವೇದನೆ ಪಡುವ ಸ್ತ್ರೀಯ ಹಾಗೆ ನಡುವಿನ ಮೇಲೆ ಕೈ ಇಟ್ಟವರ ಹಾಗೆ ನೋಡುತ್ತೇನೆ; ಯಾಕೆ ಮುಖಗಳೆಲ್ಲಾ ಕಳೆಗುಂದಿದವು?

7ಅಯ್ಯೋ, ಆ ದಿನವು ಭಯಂಕರವಾದದ್ದು; ಅದರಂಥದ್ದು ಯಾವದೂ ಇಲ್ಲ; ಅದು ಯಾಕೋಬನಿಗೆ ಇಕ್ಕಟ್ಟಿನ ಕಾಲವೇ; ಆದಾಗ್ಯೂ ಅವನು ಅದರಿಂದ ರಕ್ಷಿಸಲ್ಪಡುವನು.

8ಆ ದಿವಸದಲ್ಲಿ ಆಗುವದೇನಂದರೆ--ನಾನು ಅವನ ನೊಗವನ್ನು ನಿನ್ನ ಕುತ್ತಿಗೆಯ ಮೇಲಿನಿಂದ ಮುರಿದು ಹಾಕುವೆನು; ನಿನ್ನ ಬಂಧನಗಳನ್ನು ಹರಿದುಬಿಡುವೆನು; ಅನ್ಯರು ಇನ್ನು ಅವನಿಂದ ಸೇವೆ ಮಾಡಿಸಿಕೊಳ್ಳುವದಿಲ್ಲವೆಂದು ಸೈನ್ಯ ಗಳ ಕರ್ತನು ಅನ್ನುತ್ತಾನೆ.

9ಆದರೆ ಅವರು ತಮ್ಮ ದೇವರಾದ ಕರ್ತನಿಗೂ ಅವರಿಗೋಸ್ಕರ ನಾನು ಎಬ್ಬಿ ಸುವ ಅವರ ಅರಸನಾದ ದಾವೀದನಿಗೂ ಸೇವೆ ಮಾಡು ವರು.

ಯೆರೆಮಿಯ 30 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी