ಯೆಹೆಜ್ಕೇಲನು 20:4

ಅವರಿಗೆ ನ್ಯಾಯತೀರಿಸುವಿಯೋ? ಮನುಷ್ಯಪುತ್ರನೇ, ನೀನು ಅವರಿಗೆ ನ್ಯಾಯತೀರಿಸು ವಿಯೋ? ಅವರ ತಂದೆಗಳ ಅಸಹ್ಯವಾದವುಗಳನ್ನು ಅವರಿಗೆ ತಿಳಿಸು.

ಸಂದರ್ಭದೊಂದಿಗೆ ಓದಿ · ಯೆಹೆಜ್ಕೇಲನು 20

2ಆಮೇಲೆ ಕರ್ತನ ವಾಕ್ಯವು ನನಗೆ ಬಂದು ಹೇಳಿದ್ದೇನಂದರೆ,

3ಮನುಷ್ಯಪುತ್ರನೇ, ನೀನು ಇಸ್ರಾಯೇಲಿನ ಹಿರಿಯರ ಸಂಗಡ ಮಾತನಾಡಿ ಅವ ರಿಗೆ ಹೇಳಬೇಕಾದದ್ದೇನಂದರೆ--ದೇವರಾದ ಕರ್ತನು ಹೀಗೆ ಹೇಳುತ್ತಾನೆ--ನನ್ನ ಬಳಿಗೆ ವಿಚಾರಣೆಗಾಗಿ ಬಂದಿರೋ? ನನ್ನ ಜೀವದಾಣೆ, ನಾನು ನಿಮ್ಮಿಂದ ವಿಚಾರಿಸಲ್ಪಡುವದಿಲ್ಲವೆಂದು ದೇವರಾದ ಕರ್ತನು ಹೇಳುತ್ತಾನೆ.

4ಅವರಿಗೆ ನ್ಯಾಯತೀರಿಸುವಿಯೋ? ಮನುಷ್ಯಪುತ್ರನೇ, ನೀನು ಅವರಿಗೆ ನ್ಯಾಯತೀರಿಸು ವಿಯೋ? ಅವರ ತಂದೆಗಳ ಅಸಹ್ಯವಾದವುಗಳನ್ನು ಅವರಿಗೆ ತಿಳಿಸು.

5ಅವರಿಗೆ ಹೇಳಬೇಕಾದದ್ದೇನಂದರೆ --ದೇವರಾದ ಕರ್ತನು ಹೀಗೆ ಹೇಳುತ್ತಾನೆ--ನಾನು ಇಸ್ರಾಯೇಲನ್ನು ಆದುಕೊಂಡು ಯಾಕೋಬನ ಮನೆಯ ವಂಶದವರಿಗೆ ನನ್ನ ಕೈಯೆತ್ತಿ ಮತ್ತು ಐಗುಪ್ತ ದೇಶದಲ್ಲಿ ಅವರಿಗೆ ನನ್ನನ್ನು ತಿಳಿಯಪಡಿಸಿದ ದಿನದಲ್ಲಿ ನಾನು ಅವರಿಗೆ ನನ್ನ ಕೈಯೆತ್ತಿ ನಿಮ್ಮ ದೇವರಾದ ಕರ್ತನು ನಾನೇ ಎಂದು ಅವರಿಗೆ ಹೇಳಿದಾಗ,

6ನಾನು ಅವರಿಗೆ ನನ್ನ ಕೈಯೆತ್ತಿ--ಐಗುಪ್ತ ದೇಶದಿಂದ ಹೊರಗೆ ತಂದು ಅವರಿಗೋಸ್ಕರ ನಾನೇ ನೋಡಿಕೊಂಡಂಥ ಹಾಲೂ ಜೇನೂ ಹರಿಯುವ ಕೀರ್ತಿಯುಳ್ಳ ಎಲ್ಲಾ ದೇಶಗಳಿಗೂ ಅವರನ್ನು ಆ ದಿವಸದಲ್ಲಿ ಕರೆತಂದೆನು.

ಯೆಹೆಜ್ಕೇಲನು 20 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी