ಯೆಹೆಜ್ಕೇಲನು 18:21

ಆದರೆ ದುಷ್ಟನು ತಾನು ಮಾಡಿದ ಪಾಪಗಳನ್ನೆಲ್ಲಾ ಬಿಟ್ಟು ತಿರುಗಿಕೊಂಡು ನನ್ನ ನಿಯಮಗಳನ್ನೆಲ್ಲಾ ಕೈಕೊಂಡು ನ್ಯಾಯವನ್ನೂ ನೀತಿಯನ್ನೂ ನಡೆಸಿದರೆ ಅವನು ಸಾಯದೆ ನಿಶ್ಚಯವಾಗಿ ಬದುಕುವನು.

ಸಂದರ್ಭದೊಂದಿಗೆ ಓದಿ · ಯೆಹೆಜ್ಕೇಲನು 18

19ಆದಾಗ್ಯೂ ಇನ್ನೂ ನೀವು--ಮಗನು ತಂದೆಯ ಅಕ್ರಮವನ್ನು ಹೊರುವದಿಲ್ಲವೇ ಎಂದು ಹೇಳುವಿರಿ; ನಿಶ್ಚಯವಾಗಿ ಮಗನು ನ್ಯಾಯವನ್ನೂ ನೀತಿಯನ್ನೂ ಮಾಡಿ ನನ್ನ ನಿಯಮಗಳನ್ನೆಲ್ಲಾ ಕೈಕೊಂಡು ನಡೆದರೆ ಅವನು ನಿಶ್ಚಯವಾಗಿ ಬದುಕುವನು.

20ಪಾಪ ಮಾಡುವ ಪ್ರಾಣವು ತಾನಾಗಿ ಸಾಯುವದು; ಮಗನು ತಂದೆಯ ಅಕ್ರಮವನ್ನು ಹೊರುವದಿಲ್ಲ. ತಂದೆಯು ಮಗನ ಅಕ್ರಮವನ್ನು ಹೊರುವದಿಲ್ಲ. ನೀತಿವಂತನ ನೀತಿಯು ಅವನ ಮೇಲೆಯೇ ಇರುವದು. ದುಷ್ಟನ ದುಷ್ಟತ್ವವು ಅವನ ಮೇಲೆಯೇ ಇರುವದು.

21ಆದರೆ ದುಷ್ಟನು ತಾನು ಮಾಡಿದ ಪಾಪಗಳನ್ನೆಲ್ಲಾ ಬಿಟ್ಟು ತಿರುಗಿಕೊಂಡು ನನ್ನ ನಿಯಮಗಳನ್ನೆಲ್ಲಾ ಕೈಕೊಂಡು ನ್ಯಾಯವನ್ನೂ ನೀತಿಯನ್ನೂ ನಡೆಸಿದರೆ ಅವನು ಸಾಯದೆ ನಿಶ್ಚಯವಾಗಿ ಬದುಕುವನು.

22ಅವನು ಮಾಡಿದ ಅಪರಾಧಗಳೆಲ್ಲಾ ಅವನಿಗೆ ವಿರುದ್ದವಾಗಿ ಜ್ಞಾಪಕಮಾಡಲ್ಪಡುವದಿಲ್ಲ; ಅವನು ಮಾಡಿದ ನೀತಿಯಿಂದಲೇ ಅವನು ಬದುಕುವನು.

23ದುಷ್ಟನು ಸಾಯುವದರಲ್ಲಿ ನನಗೆ ಸ್ವಲ್ಪವಾದರೂ ಸಂತೋಷವಿ ರುವದೋ ಎಂದು ದೇವರಾದ ಕರ್ತನು ಹೇಳುತ್ತಾನೆ; ಅವನು ತನ್ನ ನಡತೆಗಳಿಂದ ಹಿಂತಿರುಗಿಕೊಂಡು ಬದು ಕಿದರೆ ನನಗೆ ಸಂತೋಷವಲ್ಲವೇ?

ಯೆಹೆಜ್ಕೇಲನು 18 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी