ಯೆಶಾಯ 10:13

ಅವನು ತನ್ನೊಳಗೆ--ನನ್ನ ಕೈಯ ಬಲ ದಿಂದಲೂ ಜ್ಞಾನದಿಂದಲೂ ಅದನ್ನು ಮಾಡಿದೆ; ನಾನು ವಿವೇಕಿ ಮತ್ತು ಜನಾಂಗಗಳ ಮೇರೆಗಳನ್ನು ಕಿತ್ತು ಅವರ ನಿಧಿಗಳನ್ನು ಕೊಳ್ಳೆಹೊಡೆದು ಅದರ ನಿವಾಸಿಗಳನ್ನು ಮಹಾವೀರನಂತೆ ಕೆಡವಿಬಿಟ್ಟಿದ್ದೇನೆ.

ಸಂದರ್ಭದೊಂದಿಗೆ ಓದಿ · ಯೆಶಾಯ 10

11ನಾನು ಸಮಾರ್ಯಕ್ಕೂ ಅದರ ವಿಗ್ರಹಗಳಿಗೂ ಮಾಡಿದಂತೆ ಯೆರೂಸಲೇಮಿಗೂ ಅದರ ವಿಗ್ರಹ ಗಳಿಗೂ ಮಾಡದೆ ಇರುವೆನೋ?

12ಆದಕಾರಣ, ಕರ್ತನು ಚೀಯೋನ್‌ ಪರ್ವತದ ಮೇಲೆಯೂ ಯೆರೂಸಲೇಮಿನ ಮೇಲೆಯೂ ತನ್ನ ಕಾರ್ಯಗಳನ್ನು ಮಾಡಿ ಮುಗಿಸಿದ ಮೇಲೆ, ಅಶ್ಶೂರದ ಅರಸನ ಹೃದಯದ ದೊಡ್ಡಸ್ತಿಕೆಯ ಫಲವನ್ನು ಅವನ ಉನ್ನತವಾದ ದೃಷ್ಟಿಯ ಘನತೆಯನ್ನು ನಾನು ದಂಡಿ ಸುವೆನು.

13ಅವನು ತನ್ನೊಳಗೆ--ನನ್ನ ಕೈಯ ಬಲ ದಿಂದಲೂ ಜ್ಞಾನದಿಂದಲೂ ಅದನ್ನು ಮಾಡಿದೆ; ನಾನು ವಿವೇಕಿ ಮತ್ತು ಜನಾಂಗಗಳ ಮೇರೆಗಳನ್ನು ಕಿತ್ತು ಅವರ ನಿಧಿಗಳನ್ನು ಕೊಳ್ಳೆಹೊಡೆದು ಅದರ ನಿವಾಸಿಗಳನ್ನು ಮಹಾವೀರನಂತೆ ಕೆಡವಿಬಿಟ್ಟಿದ್ದೇನೆ.

14ಜನಗಳ ಐಶ್ವರ್ಯವು ಗೂಡಿನಂತೆ ನನ್ನ ಕೈಗೆ ಸಿಕ್ಕಿದೆ, ಬಿಡಲ್ಪಟ್ಟ ಮೊಟ್ಟೆಗಳನ್ನು ಕೂಡಿಸುವಂತೆ ಭೂಮಿಯನ್ನೆಲ್ಲಾ ಸಂಗ್ರಹಿಸಿಕೊಂಡಿದ್ದೇನೆ; ರೆಕ್ಕೆಯಾ ಡಿಸಿ ಬಾಯಿತೆರೆದು ಕಿಚುಗುಟ್ಟುವವರು ಯಾರೂ ಇಲ್ಲವೆಂದು ಅಂದುಕೊಂಡನು.

15ಕೊಡಲಿಯು ಕಡಿಯುವವನಿಗೆ ವಿರುದ್ಧವಾಗಿ ಕೊಚ್ಚಿಕೊಂಡೀತೆ? ಇಲ್ಲವೆ ಗರಗಸವು ತನ್ನನ್ನು ಎಳೆಯುವವನ ಮೇಲೆ ಹೆಚ್ಚಿಸಿ ಕೊಂಡೀತೇ? ಕೋಲು ತನ್ನನ್ನು ಎತ್ತಿದವನ ಮೇಲೆಯೇ ಬೀಸುವಂತೆ ಅಥವಾ ಬೆತ್ತವು ತಾನು ಮರವಲ್ಲ ಎಂಬಂತೆ ತನ್ನನ್ನು ತಾನು ಎತ್ತಿಕೊಂಡ ಹಾಗೆ ಇರುವದು.

ಯೆಶಾಯ 10 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी