ನ್ಯಾಯಸ್ಥಾಪಕರು 2:16

ಆದಾಗ್ಯೂ ಕರ್ತನು ಅವರನ್ನು ಕೊಳ್ಳೆ ಹೊಡೆಯುವವರ ಕೈಯೊಳಗಿಂದ ಬಿಡಿಸಿದ ನ್ಯಾಯಾಧಿಪತಿಗಳನ್ನು ಎಬ್ಬಿಸಿದರೂ;

ಸಂದರ್ಭದೊಂದಿಗೆ ಓದಿ · ನ್ಯಾಯಸ್ಥಾಪಕರು 2

14ಆದದರಿಂದ ಕರ್ತನು ಇಸ್ರಾಯೇಲಿಗೆ ವಿರೋಧ ವಾಗಿ ಉರಿಗೊಂಡು ಅವರನ್ನು ಕೊಳ್ಳೆಹೊಡೆಯುವ ಕೊಳ್ಳೆಗಾರರ ಕೈಯಲ್ಲಿ ಒಪ್ಪಿಸಿಕೊಟ್ಟನು. ತರುವಾಯ ಅವರು ತಮ್ಮ ಶತ್ರುಗಳಿಗೆ ಎದುರಾಗಿ ನಿಲ್ಲದ ಹಾಗೆ ಅವರ ಸುತ್ತಲಿರುವ ಅವರ ಶತ್ರುಗಳ ಕೈಗೆ ಅವರನ್ನು ಮಾರಿಬಿಟ್ಟನು.

15ಕರ್ತನು ಹೇಳಿದ ಹಾಗೆಯೂ ಕರ್ತನು ಅವರಿಗೆ ಆಣೆಇಟ್ಟ ಹಾಗೆಯೂ ಅವರು ಎಲ್ಲಿ ಹೋದರೂ ಅಲ್ಲಿ ಕೇಡು ಆಗುವದಕ್ಕೆ ಕರ್ತನ ಕೈ ಅವರ ಮೇಲೆ ಇತ್ತು.

16ಆದಾಗ್ಯೂ ಕರ್ತನು ಅವರನ್ನು ಕೊಳ್ಳೆ ಹೊಡೆಯುವವರ ಕೈಯೊಳಗಿಂದ ಬಿಡಿಸಿದ ನ್ಯಾಯಾಧಿಪತಿಗಳನ್ನು ಎಬ್ಬಿಸಿದರೂ;

17ಅವರು ತಮ್ಮ ನ್ಯಾಯಾಧಿಪತಿಗಳ ಮಾತನ್ನು ಕೇಳದೆ ಅನ್ಯದೇವರುಗಳ ಹಿಂದೆ ಜಾರತ್ವಮಾಡಿ ಅವುಗಳಿಗೆ ಅಡ್ಡಬಿದ್ದು ತಮ್ಮ ತಂದೆಗಳು ಕರ್ತನ ಆಜ್ಞೆಗಳನ್ನು ಕೇಳಿ ನಡೆದ ಮಾರ್ಗವನ್ನು ಶೀಘ್ರವಾಗಿ ತೊರೆದು ಬಿಟ್ಟರು; ಅವರು ಮಾಡಿದ ಪ್ರಕಾರ ಮಾಡಲಿಲ್ಲ.

18ಕರ್ತನು ಅವರಿಗೆ ನ್ಯಾಯಾಧಿಪತಿಗಳನ್ನು ಎಬ್ಬಿಸಿ ಆತನು ನ್ಯಾಯಾಧಿಪತಿಯ ಸಂಗಡ ಇದ್ದು ಆ ನ್ಯಾಯಾಧಿಪತಿಯ ದಿನಗಳೆಲ್ಲಾ ಅವರನ್ನು ಅವರ ಶತ್ರುಗಳ ಕೈಯಿಂದ ರಕ್ಷಿಸುತ್ತಿದ್ದನು. ಯಾಕಂದರೆ ಅವರು ತಮ್ಮನ್ನು ಬಾಧಿಸಿ ಶ್ರಮೆಪಡಿಸುವವರ ನಿಮಿತ್ತ ಗೋಳಾಡುವದರಿಂದ ಕರ್ತನು ಪಶ್ಚಾತ್ತಾಪಪಟ್ಟನು.

ನ್ಯಾಯಸ್ಥಾಪಕರು 2 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी